LALABAGA FLOWER SHOW: ಸ್ವಾತಂತ್ರ್ಯೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ ‘ಗಂಗ ಸಾಮ್ರಾಜ್ಯ ವೈಭವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿದೆ.
ಬೆಂಗಳೂರು, ಆ.6: ಲಾಲ್ಬಾಗ್ನಲ್ಲಿ ಇಂದಿನಿಂದ ಆಗಸ್ಟ್ 17ರವರೆಗೆ ನಡೆಯಲಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಗಂಗರಸರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಪ್ರದರ್ಶನ ವೀಕ್ಷಿಸಿದರು.
ಈ ಬಾರಿ ಸ್ವಾತಂತ್ರ್ಯೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ ‘ಗಂಗ ಸಾಮ್ರಾಜ್ಯ ವೈಭವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿದೆ.
ಈ ವರ್ಷದ ಫ್ಲವರ್ ಶೋನಲ್ಲಿ ಗಂಗ ಸಾಮ್ರಾಜ್ಯದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಹೂವುಗಳು ಹಾಗೂ ಸಸ್ಯಗಳಿಂದ ಅನಾವರಣಗೊಳಿಸಲಾಗಿದೆ. ಬಣ್ಣ ಬಣ್ಣದ ಹೂವಿನ ಕಲಾಕೃತಿಗಳು ಮತ್ತು ವಿಶೇಷ ಥೀಮ್ ಪ್ರದರ್ಶನಗಳು ಪ್ರವಾಸಿಗರು ಮತ್ತು ಪ್ರಕೃತಿ ಪ್ರಿಯರನ್ನು ಆಕರ್ಷಿಸುತ್ತಿವೆ. ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ಗೆ ಜೆಡಿಎಸ್ ಎಂಎಲ್ಸಿ ಶರವಣ ಸಾಥ್ ನೀಡಿದರು.
ಫಲಪುಷ್ಪ ಉದ್ಘಾಟನೆ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಾಡಿನ ಎಲ್ಲ ಜನತೆಗೆ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಫಲಪುಷ್ಪ ಪ್ರದರ್ಶನ ಏರ್ಪಸಲಾಗಿದೆ. ಎಲ್ಲರೂ ಲಾಲ್ಬಾಗ್ ಭೇಟಿ ನೀಡಿ ವೀಕ್ಷಿಸಬೇಕು. ವಿಶೇಷವಾಗಿ ಹೆಣ್ಣುಮಕ್ಕಳು, ಮಕ್ಕಳು ಎಲ್ಲರೂ ಬರಬೇಕು. ಈ ಅವಕಾಶ ಕಳೆದುಕೊಳ್ಳಬಾರದು ಎಂದು ಕರೆ ನೀಡಿದರು.
