2026 Women’s T20 Asia Cup Schedule Released: ಏಷ್ಯನ್ ಕ್ರಿಕೆಟ್ ಕೌನ್ಸಿಲ್ 2026ರ ಮಹಿಳಾ ಟಿ20 ಏಷ್ಯಾಕಪ್ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್ 28ರಂದು ಆರಂಭವಾಗುವ ಈ ಪಂದ್ಯಾವಳಿ ದುಬೈನಲ್ಲಿ ಸೆಪ್ಟೆಂಬರ್ 13ರಂದು ಮುಕ್ತಾಯಗೊಳ್ಳಲಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 5ರಂದು ಮುಖಾಮುಖಿಯಾಗಲಿವೆ.
2026 Women’s T20 Asia Cup: 2026 ರ ಮಹಿಳಾ ಟಿ20 ಏಷ್ಯಾಕಪ್ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಇಂದು ಪ್ರಕಟಿಸಿದೆ. ಅದರಂತೆ 10ನೇ ಆವೃತ್ತಿಯ ಈ ಪಂದ್ಯಾವಳಿ 2026 ರ ಆಗಸ್ಟ್ 28 ರಿಂದ ಪ್ರಾರಂಭವಾಗಲಿದೆ. ಟೂರ್ನಮೆಂಟ್ನ ಎಲ್ಲಾ ಪಂದ್ಯಗಳು ಯುಎಇಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಒಟ್ಟು 8 ತಂಡಗಳು ಟೂರ್ನಮೆಂಟ್ನಲ್ಲಿ ಭಾಗವಹಿಸಲಿದ್ದು, ಈ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎಂದಿನಂತೆ ಎ ಗುಂಪಿನಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಾದ ಭಾರತ ಮತ್ತು ಪಾಕಿಸ್ತಾನದ ಜೊತೆಗೆ ಥೈಲ್ಯಾಂಡ್ ಮತ್ತು ಹಾಂಗ್ ಕಾಂಗ್ ತಂಡಗಳು ಸೇರಿವೆ. ಬಿ ಗುಂಪಿನಲ್ಲಿ ಹಾಲಿ ಚಾಂಪಿಯನ್ ಶ್ರೀಲಂಕಾ, ಬಾಂಗ್ಲಾದೇಶ, ಯುಎಇ ಮತ್ತು ಇಂಡೋನೇಷ್ಯಾ ತಂಡಗಳು ಸೇರಿವೆ.
ಭಾರತ- ಪಾಕ್ ಫೈಟ್
ಪ್ರತಿ ಗುಂಪಿನಲ್ಲಿರುವ ತಂಡಗಳು ಪರಸ್ಪರ ಒಂದೊಂದು ಪಂದ್ಯವನ್ನು ಆಡಲಿವೆ. ಇದರರ್ಥ ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಗುಂಪು ಹಂತದಲ್ಲೇ ಮುಖಾಮುಖಿಯಾಗಲಿವೆ. ಈ ಎರಡೂ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯ ಸೆಪ್ಟೆಂಬರ್ 5 ರಂದು ನಡೆಯಲಿದೆ. ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.
