E-SWATTU: ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚುವರಿ ಶ್ರಮ ವಹಿಸಿ ಮನೆ-ಮನೆಗೆ ತೆರಳಿ ಸ್ವತ್ತುಗಳ ಇ-ಸ್ವತ್ತು ಮತ್ತು ಖಾತಾ ದಾಖಲೆಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ.
ಬೆಂಗಳೂರು, ಆ.10: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿರುವ ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ಸರ್ಕಾರ ಇ-ಸ್ವತ್ತು ದಾಖಲೆಗಳನ್ನು ಮನೆ-ಮನೆಗೆ ತಲುಪಿಸುವ ಕ್ರಮಕ್ಕೆ ಮುಂದಾಗಿದೆ. ಆಸ್ತಿ ದಾಖಲೆಗಳನ್ನು ಪಡೆಯಲು ಕಚೇರಿಗಳಿಗೆ ಪದೇಪದೇ ಅಲೆದಾಡಬೇಕಾಗದಂತೆ ಈ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ.
ಇ-ಸ್ವತ್ತು ವ್ಯವಸ್ಥೆಯ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆಸ್ತಿಗಳ ವಿವರಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗುತ್ತದೆ. ಆಸ್ತಿಯ ಮಾಲೀಕತ್ವ, ಆಸ್ತಿ ಸಂಖ್ಯೆ, ವಿಸ್ತೀರ್ಣ ಸೇರಿದಂತೆ ಅಗತ್ಯ ಮಾಹಿತಿಯನ್ನು ಒಳಗೊಂಡ ದಾಖಲೆಗಳನ್ನು ಆನ್ಲೈನ್ ವ್ಯವಸ್ಥೆಯಲ್ಲಿ ನಿರ್ವಹಿಸುವುದರಿಂದ ಸಾರ್ವಜನಿಕರಿಗೆ ದಾಖಲೆ ಪಡೆಯುವುದು ಸುಲಭವಾಗಲಿದೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ಅವರು ಮಾತನಾಡಿ, ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚುವರಿ ಶ್ರಮ ವಹಿಸಿ ಮನೆ-ಮನೆಗೆ ತೆರಳಿ ಸ್ವತ್ತುಗಳ ಇ-ಸ್ವತ್ತು ಮತ್ತು ಖಾತಾ ದಾಖಲೆಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಡ್ರಾಫ್ಟ್ ಖಾತಾ ತಯಾರಾಗಿದ್ದು, ಯಾವುದೇ ಅನಗತ್ಯ ವ್ಯಕ್ತಿಗಳಿಗೆ ಅಥವಾ ಮೂರನೇ ವ್ಯಕ್ತಿಗಳಿಗೆ ಖಾತಾ ವರ್ಗಾವಣೆಗೆ ಅವಕಾಶವಿರುವುದಿಲ್ಲ. ಯಾರು ಮೂಲ ಮಾಲೀಕರಿದ್ದಾರೋ ಅವರಿಗೆ ಮಾತ್ರವೇ ಖಾತೆಗಳನ್ನು ನೀಡಬೇಕು ಎಂದು ತಿಳಿಸಿದರು.
