ಹೊಸಪೇಟೆ, ಆ.14: ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಮೇರೆಗೆ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ವಿಜಯನಗರ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಗರದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.
ನಗರದ ವಡಕರ ದೇವಸ್ಥಾನದಿಂದ ಅಭಯ ಹಸ್ತ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ನಡೆದ ರ್ಯಾಲಿಗೆ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಮೇಟಿ ಹಾಗೂ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ಚಾಲನೆ ನೀಡಿದರು. ಬಿಜೆಪಿ ಕಾರ್ಯಕರ್ತರು ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ‘ಹರ್ ಘರ್ ತಿರಂಗಾ’, ‘ಭಾರತ್ ಮಾತಾ ಕಿ ಜೈ’ ಘೋಷಣೆಗಳನ್ನು ಕೂಗುತ್ತಾ ಬೈಕ್ಗಳಲ್ಲಿ ಸಂಚರಿಸಿದರು.
80ನೇ ಸ್ವಾತಂತ್ರ್ಯೋತ್ಸವದ ಹೊಸ್ತಿಲಲ್ಲಿರುವ ವೇಳೆ ಪ್ರತಿಯೊಬ್ಬ ಭಾರತೀಯರೂ ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶದ ಒಗ್ಗಟ್ಟು, ಶಕ್ತಿ, ಸಂಸ್ಕೃತಿ ಹಾಗೂ ಅಭಿ ವೃದ್ಧಿಯನ್ನು ಸಾಂಕೇತಿಕವಾಗಿ ಪ್ರದರ್ಶಿಸಬೇಕು ತಿರಂಗಾ ಯಾತ್ರಿಕರು ಕರೆ ನೀಡಿದ್ರು.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲೂ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ವಿಶ್ವ ವಿಖ್ಯಾತ ಹಂಪಿಯಲ್ಲಿ ಹರ್ ಘರ್ ತಿರಂಗಾ ಸೆಲ್ಫಿ ಪಾಯಿಂಟ್ ಮಾಡೋ ಮೂಲಕ ಜನರಲ್ಲಿ ತಿರಂಗಾ ಯಾತ್ರೆ ಜಾಗೃತಿ ಮೂಡಿಸಲಾಯಿತು.
