RTO Janajagruti: ಯಾದಗಿರಿ ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಕನಕ ವೃತ್ತದವರೆಗೆ ವಾಹನ ಜಾಗೃತಿ ಜಾಥಾ ನಡೆಸಲಾಯಿತು. ಈ ವೇಳೆ ವಾಹನ ಚಾಲಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ರಸ್ತೆ ಸುರಕ್ಷತೆಗೆ ಆದ್ಯತೆ ನೀಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಯಾದಗಿರಿ, ಅ.2: ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯಾದಗಿರಿ ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಕನಕ ವೃತ್ತದವರೆಗೆ ವಾಹನ ಜಾಗೃತಿ ಜಾಥಾ ನಡೆಸಲಾಯಿತು. ಈ ವೇಳೆ ವಾಹನ ಚಾಲಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ರಸ್ತೆ ಸುರಕ್ಷತೆಗೆ ಆದ್ಯತೆ ನೀಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಯಾದಗಿರಿ ಪ್ರಾದೇಶಿಕ ಸಾರಿಗೆ ಇಲಾಖೆಯ ಮುಖ್ಯಸ್ಥರಾದ ಮಿಲಿಂದ್ ಕುಮಾರ್ ಎಸ್.ಎಸ್. ಅವರು, ಸಂಚಾರ ನಿಯಮಗಳ ಪಾಲನೆ ಪ್ರತಿಯೊಬ್ಬರ ಸುರಕ್ಷತೆಗೆ ಅತ್ಯಂತ ಅಗತ್ಯ ಎಂದು ತಿಳಿಸಿದರು. “ವಾಹನ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ರಸ್ತೆ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸುವ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದು ಎಂದು ಮಿಲಿಂದ್ ಕುಮಾರ್ ಹೇಳಿದರು.
ಸಂಚಾರ ನಿಯಮಗಳ ಪಾಲನೆ ನಮ್ಮ ಸುರಕ್ಷತೆಗಾಗಿ. ರಸ್ತೆ ಸುರಕ್ಷತೆ ಪ್ರತಿಯೊಬ್ಬರ ಹೊಣೆ. ಸುರಕ್ಷಿತ ಪ್ರಯಾಣಕ್ಕಾಗಿ ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂಬ ಸಂದೇಶವನ್ನು ಜಾಗೃತಿ ಕಾರ್ಯಕ್ರಮದ ಮೂಲಕ ನೀಡಲಾಯಿತು.
