ಬೆಂಗಳೂರು, ಅ.9: ರಾಜ್ಯದಲ್ಲಿ ಹಿಂಗಾರು ಮಳೆ (Rain) ಅಬ್ಬರ ಜೋರಾಗಿದೆ. ಕಳೆದ ಕೆಲ ದಿನಗಳಿಂದ ಹಲವಾರು ಕಡೆ ಮಳೆ ಚುರುಕುಗೊಂಡಿದೆ, ಈ ಬಾರಿ ಮುಂಗಾರು ಸಂಪೂರ್ಣವಾಗಿ ಕೈಕೊಟ್ಟಿದೆ. ವಾಡಿಕೆಗಿಂತ ಕಮ್ಮಿ ಮಳೆಯಾಗಿದ್ದು, ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ರೆ, ಇನ್ನೇನು ಮಳೆಗಾಲ ಮುಗಿದೇ ಹೋಯ್ತು ಅನ್ನುವಷ್ಟರಲ್ಲಿ ಹಿಂಗಾರು ಅಬ್ಬರ ಜೋರಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.

7 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಮಳೆ
ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು, ಮಳೆಯ ಜೊತೆಗೆ ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಹೀಗಾಗಿ ಸಾರ್ವಜನಿಕರು ಮುಂದಿನ 3 ಗಂಟೆಗಳ ಕಾಲ ಎಚ್ಚರಿಕೆ ವಹಿಸಲು ಹವಾಮಾನ ಸೂಚನೆ ನೀಡಿದೆ.
