Big shock for Prajwal Revanna: ಇತ್ತೀಚಿಗೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬರ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅ:9 ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಸೆಲ್ನಲ್ಲಿ ಮೊಬೈಲ್ ಪತ್ತೆಯಾದ್ದ ಬೆನ್ನಲ್ಲೇ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ಕುಮಾರ್ ಅವರು ಶುಕ್ರವಾರ ಈ ಆದೇಶ ಹೊರಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರನ್ನು ಶಿಫ್ಟ್ ಮಾಡುವ ಬಗ್ಗೆ ಬೆಳಗಾವಿಯ ಹಿಂಡಲಗಾ ಜೈಲಿಗೆ ಅಧಿಕೃತ ಇ-ಮೇಲ್ ಮಾಡಲಾಗಿದೆ. ಅಲ್ಲದೆ ಜೈಲು ಮುಖ್ಯ ಅಧೀಕ್ಷಕರಿಗೆ ಈ ಕುರಿತು ಮಾಹಿತಿ ನೀಡಲಾಗಿದ್ದು, ಆದಷ್ಟು ಬೇಗ ಹಿಂಡಲಗಾ ಜೈಲಿಗೆ ಪ್ರಜ್ವಲ್ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಯಾವಾಗ ಬೇಕಾದ್ರೂ ಎಸ್ಕಾರ್ಟ್ ಮೂಲಕ ಶಿಫ್ಟ್ ಮಾಡಬಹುದು. ಹೀಗಾಗಿ ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇತ್ತೀಚಿಗೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆದಿತ್ತು, ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬನ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇಗಾಗಿ ಸಿಸಿಬಿ ಪೊಲೀಸರು ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬನ ಕೈಯಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್ ಡ್ರೈವ್ ಮತ್ತು ನೋಟ್ಬುಕ್ ಅನ್ನು ವಶಪಡಿಸಿಕೊಂಡಿದ್ದಾರೆ.
