Open campaigning for the council elections begins, voting on October 23, counting on the 27th – ವಿಧಾನ ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಶುಕ್ರವಾರ ಅಂದರೆ, ಅಕ್ಟೋಬರ್ 23ಕ್ಕೆ ಮತದಾನ ನಡೆಯಲಿದೆ. ಅಕ್ಟೋಬರ್ 27ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ಮಾಡಲು ಅವಕಾಶ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ. ನಾಲ್ಕು ಸ್ಥಾನಗಳ ಪೈಕಿ ಕಾಂಗ್ರೆಸ್ ಹಾಗೂ ಎನ್ಡಿಎ ಪಕ್ಷಗಳು ಹೆಚ್ಚು ಸೀಟುಗಳನ್ನು ಗೆಲ್ಲುವ ಪ್ರಯತ್ನದಲ್ಲಿದೆ. ಈ ಮೂಲಕ ಪರಿಷತ್ನಲ್ಲಿ ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಮುಂದಾಗಿದೆ.
- ವಿಧಾನ ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ.
- ಶುಕ್ರವಾರ ಅಕ್ಟೋಬರ್ 23ಕ್ಕೆ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯಲಿದೆ.
- ಅಕ್ಟೋಬರ್ 27ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಬೆಂಗಳೂರು: ವಿಧಾನ ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದ್ದು, 17 ಜಿಲ್ಲೆಯಲ್ಲಿಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬಿದ್ದಿದೆ. ಮನೆ ಮನೆ ಪ್ರಚಾರಕ್ಕಷ್ಟೇ ಇನ್ನು ಅವಕಾಶವಿದೆ. ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.
ಚುನಾವಣೆ ನಡೆಯುತ್ತಿರುವ ನಾಲ್ಕು ಕ್ಷೇತ್ರಗಳ ಪೈಕಿ ಸದ್ಯ ಬಿಜೆಪಿ ಮೂರು ಸ್ಥಾನ ಹಾಗೂ ಕಾಂಗ್ರೆಸ್ ಒಂದು ಸ್ಥಾನವನ್ನು ಪ್ರತಿನಿಧಿಸುತ್ತಿದೆ.ಆದರೆ ಕಾಂಗ್ರೆಸ್ ಹಾಗೂ ಎನ್ಡಿಎ ಪಕ್ಷಗಳು ಹೆಚ್ಚು ಸೀಟುಗಳನ್ನು ಗೆದ್ದು, ಪರಿಷತ್ನಲ್ಲಿತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳುವತ್ತ ಗಮನ ಹರಿಸಿವೆ.
ಪರಿಷತ್ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿಹಿಂದಿನಿಂದಲೂ ಬಿಜೆಪಿ, ಜೆಡಿಎಸ್ ಹಿಡಿತ ಸಾಧಿಸಿಕೊಂಡೇ ಬಂದಿವೆ. ಈ ಉಭಯ ಕ್ಷೇತ್ರಗಳಲ್ಲೂಕಾಂಗ್ರೆಸ್ ಹೆಚ್ಚಿನ ಪ್ರಾಬಲ್ಯ ಗಳಿಸಿದ್ದು ಅಪರೂಪ. ಸದ್ಯ ಚುನಾವಣೆ ನಡೆದಿರುವ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿಬಿಜೆಪಿ ಸದಸ್ಯರಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲೇ ಕಾಂಗ್ರೆಸ್ನ ಪುಟ್ಟಣ್ಣ ಪ್ರತಿನಿಧಿಸುತ್ತಿದ್ದಾರೆ.
ಹಾಗಾಗಿ ಪ್ರಸ್ತುತ ಪ್ರತಿನಿಧಿಸುತ್ತಿರುವ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ಜತೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ನ ಎ.ಪಿ.ರಂಗನಾಥ್ ಗೆಲುವು ಸಾಧಿಸುವ ಮೂಲಕ ನಾಲ್ಕು ಸ್ಥಾನಗಳನ್ನು ಗೆದ್ದು ಎನ್ಡಿಎ ಪ್ರಾಬಲ್ಯವನ್ನು ವೃದ್ಧಿಸಿಕೊಳ್ಳಬೇಕು ಎಂಬುದು ಬಿಜೆಪಿ, ಜೆಡಿಎಸ್ ನಾಯಕರ ಲೆಕ್ಕಾಚಾರ. ಆ ಹಿನ್ನೆಲೆಯಲ್ಲಿಮೈತ್ರಿ ಪಕ್ಷಗಳ ನಾಯಕರು ವ್ಯಾಪಕ ಪ್ರಚಾರ ನಡೆಸಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ.
ಕಾಂಗ್ರೆಸ್ ಕೂಡ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಉಳಿಸಿಕೊಳ್ಳುವ ಜತೆಗೆ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪರಿಷತ್ನಲ್ಲಿತನ್ನ ಸ್ಥಾನವನ್ನು ಇನ್ನಷ್ಟು ಸುಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿಪ್ರಚಾರ ನಡೆಸಿದೆ. ಚುನಾವಣೆ ನಡೆದಿರುವ 17 ಜಿಲ್ಲೆಗಳ ಪದವೀಧರ ಹಾಗೂ ಶಿಕ್ಷಕ ಮತದಾರರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿಕಾಂಗ್ರೆಸ್ ನಾಯಕರು ಸಾಕಷ್ಟು ಕಸರತ್ತು ನಡೆಸಿದ್ದಾರೆ.
ಇದೇ 27ರಂದು ಮತ ಎಣಿಕೆ ನಡೆಯಲಿದ್ದು, ಅ.31ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಪ್ರತಿಷ್ಠಿತ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮೇಲ್ಮನೆಗೆ ಯಾರೆಲ್ಲಾಆಯ್ಕೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೆಲವೇ ದಿನಗಳಲ್ಲಿತೆರೆ ಬೀಳಲಿದೆ.
ಅಭ್ಯರ್ಥಿಗಳ ವಿವರ :
- ಪಶ್ಚಿಮ ಪದವೀಧರ ಕ್ಷೇತ್ರ: ಎಸ್.ವಿ.ಸಂಕನೂರ (ಬಿಜೆಪಿ), ಮೋಹನ್ ಲಿಂಬಿಕಾಯಿ (ಕಾಂಗ್ರೆಸ್)
- ಆಗ್ನೇಯ ಪದವೀಧರ ಕ್ಷೇತ್ರ: ಕೆ.ಎಂ.ಸುರೇಶ್ (ಬಿಜೆಪಿ), ಶಶಿ ಹುಲಿಕುಂಟೆಮಠ್ (ಕಾಂಗ್ರೆಸ್)
- ಈಶಾನ್ಯ ಶಿಕ್ಷಕರ ಕ್ಷೇತ್ರ: ಶಶಿಲ್ ನಮೋಶಿ (ಬಿಜೆಪಿ), ಶರಣಪ್ಪ ಮಟ್ಟೂರ (ಕಾಂಗ್ರೆಸ್)
- ಬೆಂಗಳೂರು ಶಿಕ್ಷಕರ ಕ್ಷೇತ್ರ: ಎ.ಪಿ.ರಂಗನಾಥ್ (ಜೆಡಿಎಸ್), ಪುಟ್ಟಣ್ಣ (ಕಾಂಗ್ರೆಸ್)
