Hubballi: A woman riding a scooty has died after a kite string used for flying a kite got stuck in her neck. –ಹುಬ್ಬಳ್ಳಿ: ಗಾಳಿಪಟ ಹಾರಿಸಲು ಬಳಸುವ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಹುಬ್ಬಳ್ಳಿಯ ಶಿವಶಂಕರ ಕಾಲೋನಿ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ಮಹಿಳೆಯನ್ನು ಹುಬ್ಬಳ್ಳಿಯ ಭರತ್ ನಗರದ ನಿವಾಸಿ ವಿದ್ಯಾ ಮಂಜುನಾಥ ಗೌಡರ (38) ಎಂದು ಗುರುತಿಸಲಾಗಿದೆ. ಇವರು ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ವಿದ್ಯಾ ಅವರು ಮನೆಯಿಂದ ಲ್ಯಾಬ್ಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಶಿವಶಂಕರ ಕಾಲೋನಿ ಬಳಿ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಅವರಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
