Dks meets Siddaramaiah: ಸಿದ್ದರಾಮಯ್ಯ ನಮ್ಮ ನಾಯಕರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದ್ದು, ಅವರ ಬಳಿ ಅನೇಕ ವಿಚಾರಗಳನ್ನು ಚರ್ಚೆ ಮಾಡಬೇಕಾದ್ದರಿಂದ ಅವರನ್ನು ಭೇಟಿ ಮಾಡಿ ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ಸಿಎಂ ಡಿಕೆಶಿ ಹೇಳಿದ್ದಾರೆ.
ಬೆಂಗಳೂರು, ನ.10: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ, ಸಣ್ಣ ಮುನಿಸೂ ಇಲ್ಲ. ಕೆಲವರು ನಮ್ಮ ನಡುವೆ ಮುನಿಸು ಇದೆ ಎಂಬ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ರಾಜಕಾರಣದಲ್ಲಿ ನಿಂದಕರು ಇರಬೇಕು, ವಿರೋಧಿಗಳೂ ಇರಬೇಕು. ಅವರೆಲ್ಲ ಇದ್ದಾಗಲೇ ನಮ್ಮಂತಹವರು ಶುದ್ಧ ರಾಜಕಾರಣ ಮಾಡಲು ಸಾಧ್ಯ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಮಹಾಸ್ವಾಮಿಗಳೂ ಸೇರಿದಂತೆ ಕೆಲವರು ಮಾಧ್ಯಮಗಳಲ್ಲಿ ವಿಭಿನ್ನ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಈ ವಿಚಾರಗಳಿಗೆ ಸಂಬಂಧಿಸಿದಂತೆ ನಾವು ಅವರಿಗೆ ತಿಳಿಸಬೇಕಾದ ವಿಷಯಗಳನ್ನು ಈಗಾಗಲೇ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ನಮ್ಮ ನಾಯಕರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ಅವರ ಬಳಿ ಅನೇಕ ವಿಚಾರಗಳನ್ನು ಚರ್ಚೆ ಮಾಡಬೇಕಾದ್ದರಿಂದ ಅವರನ್ನು ಭೇಟಿ ಮಾಡಿ ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.
