Council Election Result: Today’s council fight result; Who won in 4 seats? Who lost? – ಪಶ್ಚಿಮ ಪದವೀಧರರ ಕ್ಷೇತ್ರದ ಎಣಿಕೆ ಧಾರವಾಡದಲ್ಲಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಎಣಿಕೆ ಕಲಬುರಗಿಯಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದ ಮತ ಎಣಿಕೆ ಬೆಂಗಳೂರಲ್ಲಿ ನಡೆಯಲಿದ್ದು, ಮತ ಎಣಿಕೆ ಶುರುವಾಗಿದೆ. ಜೋರಾಗಿದೆ ಸೋಲು-ಗೆಲುವಿನ ಲೆಕ್ಕಾಚಾರ.
ಬೆಂಗಳೂರು ಅ.27: ವಿಧಾನ ಪರಿಷತ್ತಿನ 2 ಪದವೀಧರ, 2 ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು 4 ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಪಶ್ಚಿಮ ಪದವೀಧರರ ಕ್ಷೇತ್ರದ ಎಣಿಕೆ ಧಾರವಾಡದಲ್ಲಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಎಣಿಕೆ ಕಲಬುರಗಿಯಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದ ಮತ ಎಣಿಕೆ ಬೆಂಗಳೂರಲ್ಲಿ ನಡೆಯಲಿದ್ದು, ಮತ ಎಣಿಕೆ ಶುರುವಾಗಿದ್ದು, ಸಂಜೆ ವೇಳೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಪ್ರಮುಖ 8 ಮಂದಿ ಸ್ಪರ್ಧಿಗಳು : ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಪಟ್ಟಣ್ಣ, ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ್, ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ, ಪಶ್ಚಿಮ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕ ನೂರು, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ.ನಮೋಶಿ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಚುನಾವಣಾ ಕಣದಲ್ಲಿರುವ ಪ್ರಮುಖರಾಗಿದ್ದು. ಇದೀಗ ಎಲ್ಲರ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ.
43 ಅಭ್ಯರ್ಥಿಗಳ ಪೈಕಿ ಗೆಲ್ಲುವ ನಾಲ್ವರು ಯಾರು? : ವಿಧಾನ ಪರಿಷತ್ತಿನ ಈ ನಾಲ್ಕು ಕ್ಷೇತ್ರಗಳ ಪೈಕಿ ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ 6 ಅಭ್ಯರ್ಥಿಗಳು ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ 10 ಮಂದಿ ಅಭ್ಯರ್ಥಿಗಳು ಸೇರಿ ಒಟ್ಟು 43 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. 43 ಜನರಲ್ಲಿ ಗೆಲ್ಲುವ ನಾಲ್ವರು ಯಾರು ಎಂಬ ಕುತೂಹಲಕ್ಕೆ ಇಂದು ಸಂಜೆಯೇ ತೆರೆ ಬೀಳಲಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಯಾರಿಗೆ ಗೆಲುವು? : ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಶಿಕ್ಷಕರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಶುರುವಾಗಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಇರುವ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಪೊಲೀಸ್ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.
ಆಗ್ನೇಯ ಪದವೀಧರರ ಕ್ಷೇತ್ರ
ಕಾಂಗ್ರೆಸ್ – ಶಶಿ ಹುಲಿಕುಂಟೆ ಮಠ್
ಬಿಜೆಪಿ – ಕೆ ಎಮ್ ಸುರೇಶ್
ಬೆಂಗಳೂರು ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್- ಪುಟ್ಟಣ್ಣ
ಎನ್ಡಿಎ ಅಭ್ಯರ್ಥಿ- ಎ ಪಿ ರಂಗನಾಥ್
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪುಟ್ಟಣ್ಣ ಹಾಗೂ ಜೆಡಿಎಸ್ನ ಎ.ಪಿ. ರಂಗನಾಥ್ ಪ್ರಮುಖ ಕಣದಲ್ಲಿದ್ದಾರೆ. ಆಡಳಿತರೂಢ ಕಾಂಗ್ರೆಸ್ ಗೆ ಇದು ಪ್ರತಿಷ್ಠೆಯ ಕ್ಷೇತ್ರವಾಗಿದೆ. ಸ್ವತಃ ಸಿಎಂ ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪುಟ್ಟಣ್ಣ ಅವರು ಕಣದಲ್ಲಿದ್ದಾರೆ. ಅವರ ಪರವಾಗಿ ಸ್ವತಃ ಸಿಎಂ ಡಿಕೆಶಿ ಪ್ರಚಾರ ನಡೆಸಿದ್ದರು.
