A.P.Ranganath Feliciated by T.A.Sharavana: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಎನ್ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ಅವರಿಗೆ ಅಭಿನಂದನಾ ಕಾರ್ಯಕ್ರಮ.
ಬೆಂಗಳೂರು, ಅ.29: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಎ.ಪಿ. ರಂಗನಾಥ್ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ.ಸುರೇಶ್ ಬಾಬು ಮತ್ತು ಶಾಸಕರು, ವಿಧಾನ ಪರಿಷತ್ ಹಾಗು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ.ಎ. ಶರವಣ ಅವರು ಅಭಿನಂದಿಸಿದರು.
ವಿಧಾನಸೌಧದ ಕೊಠಡಿ ಸಂಖ್ಯೆ 141ರಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಶಾಸಕರಾದ ಶ್ರೀ ಸುರೇಶ್ ಬಾಬು ಅವರ ಕಚೇರಿಯಲ್ಲಿ ಅಭಿನಂದಿಸಲಾಯಿತು.
