HDK-demands-probe-into-whatsapp-chat-of-hassan-DC-demanding-bribe: DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ?: ಹಾಸನ ಜಿಲ್ಲಾಡಳಿತದಲ್ಲಿ ಸಂಚಲನ ಸೃಷ್ಟಿಸಿದ ವಾಟ್ಸ್ಆ್ಯಪ್ ಚಾಟ್. ಈ ವಾಟ್ಸ್ಆ್ಯಪ್ ಸಂಭಾಷಣೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಲತಾ ಕುಮಾರಿ ಅವರನ್ನು ಮುಂದುವರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂ. ನೀಡಬೇಕೆಂಬ ಪ್ರಸ್ತಾಪವಿದೆ.
ಹಾಸನ, ನ.10: ಹಾಸನ ಜಿಲ್ಲಾಡಳಿತದಲ್ಲಿ ಭಾರಿ ಲಂಚದ ದಂಧೆ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಜಿಲ್ಲಾಧಿಕಾರಿ (DC) ಕಚೇರಿಯ 15 ಪುಟಗಳ ವಾಟ್ಸಾಪ್ ಚಾಟ್ ಸಂಭಾಷಣೆಯನ್ನು ಬಿಡುಗಡೆ ಮಾಡಿ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಹಾಸನದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್ಡಿಕೆ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಆಪ್ತ ಸಹಾಯಕ (PA) ಶಶಿಕಿರಣ್ ಹಾಗೂ ಮಧ್ಯವರ್ತಿಯೊಬ್ಬರ ನಡುವೆ ನಡೆದಿದೆ ಎನ್ನಲಾದ ಮೊಬೈಲ್ ಸಂಭಾಷಣೆಯ ಪ್ರತಿಗಳನ್ನು ಬಹಿರಂಗಪಡಿಸಿದ್ದಾರೆ.
ಈ ಪ್ರಕರಣದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕ (ಡಿಜಿ ಮತ್ತು ಐಜಿಪಿ) ಎಂ.ಎ. ಸಲೀಂ ಅವರು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಈ ವಾಟ್ಸ್ಆ್ಯಪ್ ಸಂಭಾಷಣೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಲತಾ ಕುಮಾರಿ ಅವರನ್ನು ಮುಂದುವರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂ. ನೀಡಬೇಕೆಂಬ ಪ್ರಸ್ತಾಪವಿದೆ. ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ಮುಖಕ್ಕೆ ಟವೆಲ್ ಕಟ್ಟಿಕೊಂಡು ಬಂದು ಈ ಸಂಭಾಷಣೆಯ ಪ್ರತಿಯನ್ನು ತಮಗೆ ನೀಡಿ ತೆರಳಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
