MLC T .A.Sharavana meets Primeminister Narendra modi at bangalore: ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಾಗ ಶಾಸಕರು, ವಿಧಾನ ಪರಿಷತ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕರಾದ ಶ್ರೀ ಟಿ.ಎ. ಶರವಣ ಅವರು ಭೇಟಿಯಾಗಿ ಹೃತ್ಪೂರ್ವಕ ಶುಭಾಶಯ ತಿಳಿಸಿದ ಕ್ಷಣ.
ಬೆಂಗಳೂರು, ನ.17: ಕರ್ನಾಟಕದ ರಾಜಧಾನಿ ಬೆಂಗಳೂರಿನ ಭೇಟಿಯ ಸಂದರ್ಭದಲ್ಲಿ ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ಉಪನಾಯಕರು ಜೆಡಿಎಸ್ ಶಾಸಕಾಂಗ ಪಕ್ಷ ಶ್ರೀ ಟಿ.ಎ. ಶರವಣ ಅವರು, ಈ ಭೇಟಿಯು ತಮ್ಮ ಜೀವನದ ಅತ್ಯಂತ ಹೆಮ್ಮೆಯ ಹಾಗೂ ಸ್ಮರಣೀಯ ಕ್ಷಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಾನ್ಯ ಪ್ರಧಾನಮಂತ್ರಿಯವರನ್ನು ಮುಖಾಮುಖಿಯಾಗಿ ಭೇಟಿಯಾಗಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡ ಈ ವಿಶೇಷ ಕ್ಷಣವು ಅಪಾರ ಸಂತೋಷ, ಗೌರವ ಮತ್ತು ಹೆಮ್ಮೆಯ ಅನುಭವವನ್ನು ನೀಡಿದೆ. ದೇಶದ ನಾಯಕತ್ವ ವಹಿಸಿರುವ ಪ್ರಧಾನಮಂತ್ರಿಯವರೊಂದಿಗಿನ ಈ ಭೇಟಿಯು ಸದಾ ನೆನಪಿನಲ್ಲಿ ಉಳಿಯುವ ಅಮೂಲ್ಯ ಕ್ಷಣವಾಗಿದೆ ಎಂದು ಟಿ.ಎ. ಶರವಣ ತಿಳಿಸಿದ್ದಾರೆ.
ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರದ ಪ್ರಗತಿಯ ಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ಪ್ರಧಾನಮಂತ್ರಿಯವರನ್ನು ಭೇಟಿಯಾದದ್ದು ತಮ್ಮ ಪಾಲಿಗೆ ಹೆಮ್ಮೆಯ ಸಂಗತಿ ಎಂದು ಅವರು ಸಂತಸ ಹಂಚಿಕೊಂಡಿದ್ದಾರೆ.

