ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿ ಹಬ್ಬಿಸುವರ ವಿರುದ್ಧ ಕಾನೂನು ಕ್ರಮ ಜರುಗಿಸಿ
ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಕ್ಷೇತ್ರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು . ವಿಜಯಪುರ ನಗರದಲ್ಲಿ ಧರ್ಮಸ್ಥಳದ ಅಭಿಮಾನ ಸಂಘದ ವತಿಯಿಂದ ಸುದ್ದಿಗೋಷ್ಠಿಯನ್ನು ಹಮ್ಮಿಕೊಳ್ಳಲಾಯಿತು. ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವು ಒಂದಾಗಿದೆ. ಸರಿಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಎಂದೇ ನಾಮಾಂಕಿತವಾದ ಧರ್ಮಸ್ಥಳವೆಂಬ ಪವಿತ್ರ ಕ್ಷೇತ್ರವು ರಾಜ್ಯದಲ್ಲಿ ಅಲ್ಲದೆ ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹೀಗೆ ದೇಶದ ನಾನಾ ಕಡೆಗಳಿಂದ ನಿತ್ಯ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಸುಮಾರು 50 ಸಾವಿರ ದಿಂದ.1ಲಕ್ಷ ಮಂದಿ ಭಕ್ತರು ಆಗಮಿಸುತ್ತಾರೆ.
ಕಳೆದ ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣವರು, ಮಹೇಶ್ ಶೆಟ್ಟಿ ತಿಮ್ಮ ರೆಡ್ಡಿ, ಸಮೀರ್ ಎಂಡಿ, ಸಂತೋಷ್ ಶೆಟ್ಟಿ, ಜಯಂತ್ ಟಿ, ಅಜಯ್ ಅಂಚನ್ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಪೂಜ್ಯನಿಯ ಶ್ರೀ ಡಿ.ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳು ಮಟ್ಟದ ಭಾಷೆಯನ್ನು ಉಪಯೋಗಿಸಿ ವಿಡಿಯೋ ತುಣುಕುಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯವನ್ನು ಗುರಿಯಾ ಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಶ್ರೀ ಕ್ಷೇತ್ರದ ಕೋಟ್ಯಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ.ಇದರಿಂದಾಗಿ ಈಗಾಗಲೇ ಸಮಾಜದಲ್ಲಿ ಎರಡು ಬಣಗಳು ನಿರ್ಮಾಣವಾಗುವ ಲಕ್ಷಣಗಳು ಗೋಚರಿಸುತ್ತಿವೆ.ಇದು ಮುಂದಿನ ದಿನಗಳಲ್ಲಿ ಸಮಾಜದ ಶಾಂತಿ ಭಂಗಕ್ಕೆ ಕಾರಣವಾಗಬಹುದು.
ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಿ ಧರ್ಮಸ್ಥಳದ ಹೆಸರನ್ನು ಕೆಡಿಸಲು ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಕಾನೂನು ರೀತಿಯಿಂದ ಯಾರು ಧರ್ಮಸ್ಥಳದ ಹೆಸರಿಗೆ ಧಕ್ಕೆ ತರುತ್ತಾರೋ ಅವರ ವಿರುದ್ಧ ಕಾನೂನು ರೀತಿಯಿಂದ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
