ಕೂಡಲಸಂಗಮದ ತ್ರಿವೇಣಿ ಸಂಗಮದಲ್ಲಿ ನದಿಗೆ ಬಾಗಿನ ಅರ್ಪಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ



ಬಾಗಲಕೋಟೆ: ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಕೂಡಲಸಂಗಮದ ತ್ರಿವೇಣಿ ಸಂಗಮದಲ್ಲಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಲೋಕ ಕಲ್ಯಾಣಾರ್ಥವಾಗಿ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ನಗರದ ಯುವ ಸೀರೆ ಉದ್ಯಮಿಯಾದ ಶಿವು ಮುರುಡಿ ಆಯೋಜಿಸಿದದ್ದ ಕಾರ್ಯಕ್ರಮದಲ್ಲಿ ಬಸವ ಮೃತ್ಯುಂಜಯ ಸವಾಮೀಜಿ ನೇತೃತ್ವದಲ್ಲಿ ಬಾಗಿನ ಅರ್ಪಿಸಿದ್ದಾರೆ. ಶಿವು ಮುರುಡಿ ಕುಟುಂಬಸ್ಥರು 150 ಮಹಿಳೆಯರಿಗೆ ಉಚಿತ ಸೀರೆ ವಿತರಿಸಿ ದೇವಸ್ಥಾನ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ಪ್ರಸಾದ ವ್ಯವಸ್ಥೆ ಮಾಡಿದ್ದು ಕೂಡಲಸಂಗಮನಾಥನ ಕೃಪೆಗೆ ಪಾತ್ರರಾದರು.
