
ಈ ವರ್ಷ ಜೂನ್ನಿಂದ ಪ್ರಾರಂಭವಾದ ಮಳೆ ಬಿಡುವು ಪಡೆಯದೆ ಸುರಿಯುತ್ತಲೇ ಇದೆ ಅದರಲ್ಲೂ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಂತೂ ಮಳೆಯಿಂದಾಗಿ ಹೈರಾಣಾಗಿವೆ ಅಲ್ಲಿನ ನೆಲ ಒಣಗಲು ಅವಕಾಶವೇ ಇಲ್ಲದಂತೆ ನಿರಂತರವಾಗಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಸೆಪ್ಟೆಂಬರ್ ತಿಂಗಳಿಗೆ ಕಾಲಿಟ್ಟರೂ ಮಳೆ ಕಡಿಮೆಯಾಗುತ್ತಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಲೇ ಇದೆ.ಇಂದು ಕರಾವಳಿ ಭಾಗದಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ, ದಕ್ಷಿಣ ಕನ್ನಡ ಜಿಲ್ಲೆಯಾದ್ಯತ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ ಸಹಿತ ಹಗುರ ಮಳೆಯಾಗಗಲಿದೆ.ಹಾಗೇ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನು ಸೆಪ್ಟೆಂಬರ್ 8ರವರೆಗೂ ಮಳೆ ಜಾಸ್ತಿ ಇರಲಿದೆ. ಇಂದು ರಾಜ್ಯದಲ್ಲಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.
ಬೆಂಗಳೂರಲ್ಲಿ ಹೇಗಿದೆ ವಾತಾವರಣ?
ಬೆಂಗಳೂರಲ್ಲಿ ತಿಂಗಳುಗಳಿಂದಲೂ ಮೋಡ ಕವಿದ ವಾತಾವರಣವೇ ಇರುತ್ತಿದೆ. ಇನ್ನು ಬೆಂಗಳೂರಲ್ಲಿ ಸೋಮವಾರ ಭಾರಿ ಮಳೆಯಾಗಿದೆ. ತಗ್ಗಿನ ಪ್ರದೇಶಗಳಲ್ಲಿ ಅಷ್ಟೇ ಅಲ್ಲ, ಕೆಲವು ಫ್ಲೈ ಓವರ್ಗಳ ಮೇಲೆ ಕೂಡ ಮೊಣಕಾಲು ಮಟ್ಟದ ನೀರು ನಿಂತಿತ್ತು. ಸೆ.8ರವರೆಗೂ ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಬೆಂಗಳೂರಲ್ಲಿ 20 ಡಿಗ್ರಿ ಸೆಲ್ಸಿಯಸ್ನಿಂದ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ವರೆಗೆ ಉಷ್ಣತೆ ಇರಲಿದೆ. ಆರ್ದ್ರತೆಯ ಮಟ್ಟವು ಶೇ. ಮತ್ತು ಶೇ.95ರ ನಡುವೆ ಏರಿಳಿತ ಆಗುತ್ತಿರುತ್ತದೆ ಎಂದು ಹೇಳಲಾಗಿದೆ. ಹವಾಮಾನಕ್ಕೆ ಸಂಬಂಧಪಟ್ಟಂತೆ ಯಾವುದೇ ಎಚ್ಚರಿಕೆಯೂ ಇಲ್ಲ.
