ರಾಯಚೂರು : ರಾಯಚೂರಿನ ಮಸ್ಕಿ ತಾಲೂಕಿನ ಬಸ್ ಸ್ಟ್ಯಾಂಡ್ನಲ್ಲಿ ಬಸ್ ಬಾರದೆ ಗಂಟೆ ಗಟ್ಟಲೆ ಕಾದು ಕುಳಿತ ವಿದ್ಯಾರ್ಥಿಗಳು ಪ್ರಯಾಣಿಕರು ಪರದಾಡುವ ಸ್ಥಿತಿ ಎದುರಾಗಿದೆ. ಇನ್ನು ಸಂಜೆಯಾದರೆ ಸಾಕು ಕೆಲ ಗ್ರಾಮ- ಹಳ್ಳಿಗಳಿಗೆ ಸಂಪರ್ಕಿಸುವ ಬಸ್ ಬಾರದೆ ವಿದ್ಯಾರ್ಥಿಗಳು ತೊಂದರೆಗೊಳಗಾಗುತ್ತಿದ್ದಾರೆ. ಈ ಸಮಸ್ಯೆ ಕೆಲ ದಿನ ,ಕೆಲ ವಾರಗಳಲ್ಲದೆ ವರ್ಷಗಳಿಂದ ಈ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಅಲ್ಲಿನ ಸಿಬ್ಬಂದಿ ಜೊತೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು. ಇನ್ನು ಕೇವಲ ಬಸ್ ಸಮಸ್ಯೆಯಲ್ಲದೆ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ , ಶೌಚಾಲಯ ದ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವ ಸ್ಥಿತಿ ಬಂದಿದೆ. ಕರೆ ಮಾಡಿದರೆ ಬಸ್ ಡಿಪ್ಪೋ ಮ್ಯಾನೇಜರ್ ಅಸಮಂಜಸ ಉತ್ತರಗಳನ್ನು ನೀಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
