ಕಲಬುರ್ಗಿ : ಕಲಬುರ್ಗಿ ನಗರದ ವಿಶ್ವರಾಧ್ಯ ದೇವಸ್ಥಾನದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುವ ವಿಷಯವಾಗಿ ಕೆಲಸ ಮಾಡುತ್ತಿದ್ದ ಬಂಕ್ ಹುಡುಗನ ಮೇಲೆ ಹಲ್ಲೆ ಮಾಡಿದ್ದಾರೆ. ಪೆಟ್ರೋಲ್ ಹಾಕಿಸಲು ಬಂದ ಸುಮಾರು 6-7 ಯುವಕರು ಕಾರಣ ಗೊತ್ತಿಲ್ಲದೆ ಬಂಕ್ ಕೆಲಸಗಾರ ತ್ರಿಶೂಲ್ ಎಂಬ ಯುವಕನ ಮೇಲೆ ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಪುಡಿ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಯುವಕನ ಮೇಲೆ ಹಲ್ಲೆ ಮಾಡುವ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಪುಂಡರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಸಿದ್ದಾರೆ.
