ವಿಜಯಪುರ : ಸಿಂದಗಿ ತಾಲ್ಲೂಕಿನ ರಾಂಪುರದಲ್ಲಿ ಯುನೂಸ್ ಅಕ್ಸಾರ್ ಪಟೇಲ್ ಎಂಬಾತನ ಮೇಲೆ ಪ್ರಕರಣ ದಾಖಲಾಗಿದ್ದು, ಓರ್ವ ವ್ಯಕ್ತಿಗೆ ಚಾಕು ತೋರಿಸಿ ಆತನ ಬಳಿಯಿದ್ದ 25,000 ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದಾನೆ. ಈ ಪ್ರಕರಣ ಕುರಿತು ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬೆನ್ನು ಹತ್ತಿದ ಖಾಕಿ ಸಿಂದಗಿಯ ರಾಂಪುರ ಗ್ರಾಮದಲ್ಲಿ ತಪ್ಪಿಸಿಕೊಂಡು ಹೋಗುವಂತಹ ಸಂದರ್ಭದಲ್ಲಿ ಆತನ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿ, ಗುಂಡೇಟಿಗೆ ರೌಡಿಶೀಟರ್ ನ್ನು ಆಸ್ಪತ್ರೆಗೆ ಸೇರಿಸಲಾಯಿತು. ದುರಾದೃಷ್ಟವಶಾತ್ ಆರೋಪಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ
