ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಕೋಲಾರ ರಾಷ್ಟ್ರೀಯ ಹೆದ್ದಾರಿ ಬಳಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಸ್ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದೆ, ದುರಂತದಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಟ್ಯಾಂಕರ್ ಸಂಪೂರ್ ನಜ್ಜು ಗುಜ್ಜಾಗಿದ್ದು, ಅಪಘಾತವನ್ನು ನೋಡಿದ ಗ್ರಾಮಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
