ಕರ್ನೂಲ್: ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಫಾರ್ಚುನರ್ – ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 5 ಜನ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದಲ್ಲಿ ನಡೆದಿದೆ.
ಮಂತ್ರಾಲಯಕ್ಕೆ ಹೊರಟಿದ್ದ ಶಿಫ್ಟ್ ಕಾರು ಮತ್ತು ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಕಾರುಗಳ ನಡುವೆ ರಾಷ್ಟ್ರೀಯ ಹೆದ್ದಾರಿ167 ಬಳಿ ಡಿಕ್ಕಿ ಹೊಡೆದ ಪರಿಣಾಮ ಕಾರುಗಳ ಮುಂಭಾಗ ನಜ್ಜು-ಗುಜ್ಜಾಗಿದೆ. ಕಾರಿನಲ್ಲಿದ್ದ ಐವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಮ್ಮಿಗನೂರು ಠಾಣಾ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
