
ಬಳ್ಳಾರಿ : ಬಳ್ಳಾರಿ ನಗರದಲ್ಲಿ ಬೈಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಲಕ್ಷ ರೂ. ಮೌಲ್ಯದ ವಾಹನ ಸುಟ್ಟು ಕರಕಲಾದ ಘಟನೆ ಬಳ್ಳಾರಿಯ ಅನಂತಪುರ ರಸ್ತೆ ಬಳಿ ನಡೆದಿದೆ. ಬಳ್ಳಾರಿಯಲ್ಲಿ ಯಮಹಾ ಕಂಪನಿಯ 45ಲಕ್ಷ ಬೆಲೆ ಬಾಳುವ 40 ವಾಹನಗಳನ್ನು ಹೊತ್ತು ರಸ್ತೆ ಬದಿ ನಿಂತಿದ್ದ ಲಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಕಾನಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಬೆಂಕಿ ಆವರಿಸಿಕೊಂಡಿತು. ದುರ್ಘಟನೆಯಲ್ಲಿ ಸುಮಾರು 45 ಲಕ್ಷ ಮೌಲ್ಯದ 40 ಬೈಕ್ಗಳು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತದ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿಯ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಅಪಘಾತಕ್ಕೆ ನಿಖರ ಕಾರಣ ಕುರಿತು ತನಿಖೆಯನ್ನು ಆರಂಭಿಸಿದ್ದಾರೆ.,
