ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಹೊರವಲಯದಲ್ಲಿರುವ ಶೆಹಜಾದ್ ಟೌನ್ ಪ್ರದೇಶದ ಶಿಯಾ ಮಸೀದಿಯಲ್ಲಿ ಇಂದು ಶುಕ್ರವಾರದ ಪ್ರಾರ್ಥನೆಯ ವೇಳೆ ಭೀಕರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ ಇದುವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸುಮಾರು 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದನ್ನೂ ಓದಿ | ಚೆನ್ನೈನಲ್ಲಿ ಹಕ್ಕಿ ಜ್ವರ ಅಬ್ಬರ: ಸಾವಿರಕ್ಕೂ ಹೆಚ್ಚು ಕಾಗೆಗಳ ಸಾವು !
ವಿಶೇಷವೆಂದರೆ, ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಇಸ್ಲಾಮಾಬಾದ್ನಲ್ಲಿದ್ದ ಸಮಯದಲ್ಲೇ ಈ ದಾಳಿ ನಡೆದಿದೆ. ನಗರದಲ್ಲಿ ಬಿಗಿ ಭದ್ರತೆ ಇದ್ದಾಗ್ಯೂ, ಆತ್ಮಾಹುತಿ ಬಾಂಬರ್ ಮಸೀದಿಯೊಳಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಗೇಟ್ ಬಳಿ ಭದ್ರತಾ ಸಿಬ್ಬಂದಿ ಅವನನ್ನು ತಡೆದಾಗ, ಆತ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
