Shivashankarappa S Sahukar-KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು https://www.google.com/search?q=shivashankarappa+sahukar+wikipedia+kpsc&sca_esv=20b4b65056ec4911&biw=988&bih=917&sxsrf=APpeQnsUg4EFAoJ_hxejdQ0m_PCQW0trGw%3A1783936576058&ei=QLZUauP6Arry4-EP0ozLwAI&oq=kpsc+shivashankarappa+s+sahukar+wikipedia&gs_lp=Egxnd3Mtd2l6LXNlcnAiKWtwc2Mgc2hpdmFzaGFua2FyYXBwYSBzIHNhaHVrYXIgd2lraXBlZGlhKgIIADIFEAAY7wUyBRAAGO8FMgUQABjvBTIIEAAYgAQYogRItTRQ_QhY5BZwAXgBkAEAmAF-oAG0BKoBAzEuNLgBAcgBAPgBAZgCBqACzATCAgcQIxiwAxgnwgIKEAAYRxjWBBiwA8ICBxAjGLACGCeYAwCIBgGQBgmSBwMxLjWgB_sYsgcDMC41uAfEBMIHBTAuNC4yyAcQgAgB&sclient=gws-wiz-serp
ಪುತ್ರಿಯರಿಗೆ ಅಕ್ರಮ ನೆರವು ಆರೋಪದಡಿ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ… ಶಿವಶಂಕರಪ್ಪ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟಿಗೆ ಉಲ್ಲೇಖಿಸಲು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.
ಬೆಂಗಳೂರು, ಜುಲೈ 13: ಕೈಗಾರಿಕಾ ವಿಸ್ತರಣಾಧಿಕಾರಿಯಾಗಿ ತನ್ನ ಇಬ್ಬರು ಪುತ್ರಿಯರ ನೇಮಕವಾಗಲು ಸಹಕರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ಕೂಡಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಆದೇಶ ಹೊರಡಿಸಿದ್ದಾರೆ.
ಶಿವಶಂಕರಪ್ಪ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಸುಪ್ರೀಂಕೋರ್ಟಿಗೆ ಉಲ್ಲೇಖಿಸಲು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಮುಂದಿನ ಆದೇಶದವರೆಗೆ ಹಿರಿಯ ಸದಸ್ಯರು ಕೆಪಿಎಸ್ ಸಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪ ಕೇಳಿಬಂದಿದೆ. ತಮ್ಮ ಪುತ್ರಿಗೆ ಸರ್ಕಾರಿ ಹುದ್ದೆ ಕೊಡುವ ಸಲುವಾಗಿ, ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ಹಾಕಲು ಅವರು ಸಹಕರಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಹಾಗಾಗಿ ಕೆಪಿಎಸ್ಸಿ ಹುದ್ದೆಯಿಂದ ಶಿವಶಂಕರಪ್ಪ ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
