ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ದಿನೇ ದಿನೇ ಗಂಭಿರವಾಗ್ತಿದೆ. ಕಳೆದ ಮೂರು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ನಿರಂತರ ಚಿಕಿತ್ಸೆ ನಡೆಯುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಜ್ಜಿ ಚೆನ್ನಮ್ಮರನ್ನು ನೋಡಲು ಹೊರ ಬರ್ತಾರಾ..? ಅಜ್ಜಿಯನ್ನ ನೋಡ್ತಾರಾ ಅನ್ನೋ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಈ ಹಿನ್ನಲೆ ಕೋರ್ಟ್ಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸುವ ಸಾಧ್ಯತೆ ಕೂಡ ಹೆಚ್ಚಿದೆ.
ಹೌದು ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಜ್ಜಿ ಚೆನ್ನಮ್ಮರನ್ನು ನೋಡಲು ಹೊರ ಬರುವ ಸಾಧ್ಯತೆ ಇದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಪೆರೋಲ್ ಅರ್ಜಿ ಸಲ್ಲಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ. ಅಜ್ಜಿಯನ್ನು ನೋಡಲು ಅವರು ಜೈಲಿನಿಂದ ಹೊರಬರಲು ಪ್ರಯತ್ನಿಸುವ ಸಾಧ್ಯತೆ ಇದೆ.
