ಮೈಸೂರು :- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜನೆಗೆ ವಿರೋಧ ವ್ಯಕ್ತಪಡಿಸಿ ಪರಿಸರವಾದಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಇಂದು ಪ್ರತಿಭಟನೆ ನಡೆಸಿದರು. ಕಂಬಳಕ್ಕಾಗಿ ಗುರುತಿಸಲಾಗಿರುವ ಸಾತಗಳ್ಳಿ ಪ್ರದೇಶದಲ್ಲೇ ಶಾಮಿಯಾನ ಹಾಕಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಇರೋದು ಒಂದೇ ಒಂದು ಭೂಮಿ, ಉಳಿಸೋಣ ಬನ್ನಿ ನಾವಿಂದೇ ಹಾಗೂ ಪರಿಸರಕ್ಕಾಗಿ ನಾವು ಎಂಬ ಘೋಷವಾಕ್ಯಗಳಿರುವ ಬ್ಯಾನರ್ಗಳನ್ನು ಪ್ರದರ್ಶಿಸಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಹಾಗೂ ಬಳ ಆಯೋಜನೆ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.
ಇನ್ನೂ ಈ ಪ್ರತಿಭಟನೆಯಲ್ಲಿ ಪಾರಂಪರಿಕ ತಜ್ಞರು, ಮಾಜಿ ಶಾಸಕ ಎ.ಟಿ. ರಾಮಸ್ವಾಮಿ, ಪರಶುರಾಮ ಗೌಡ, ರೈತ ಸಂಘಟನೆಯ ಮುಖಂಡ ಬಡಗಲಪುರ ನಾಗೇಂದ್ರ, ಹೊಸಕೋಟೆ ಬಸವರಾಜ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಕಂಬಳವನ್ನ ವಿರೋಧಿಸಿದ್ದರು.. ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವುದರಿಂದ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸ್ಥಳದ ಆಯ್ಕೆ ಹಾಗೂ ಕಾರ್ಯಕ್ರಮದ ಕುರಿತು ಮರುಪರಿಶೀಲನೆ ನಡೆಸುವಂತೆ ಒತ್ತಾಯಿಸಿದರು.
