ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು ಕೊನೆಯುಸಿರೆಳಿದಿದ್ದಾರೆ. ಉಸಿರಾಟ ತೊಂದರೆ ಹಿನ್ನೆಲೆ ನಗರದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಚೆನ್ನಮ್ಮ ಅವರ ಅಗಲಿಕೆಯಿಂದ ದೇವೇಗೌಡರ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದ್ದು, ಮುಂದಿನ ವಿಧಿವಿಧಾನಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ ಮತ್ತು ನಿಖಿಲ್ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.
ಹಾಸನದಲ್ಲಿ ನಡೆಯುತ್ತೆ ಚೆನ್ನಮ್ಮ ಅಂತ್ಯಕ್ರಿಯೆ
ಇನ್ನೂ, ಚೆನ್ನಮ್ಮ ಅವರ ಅಂತಿಮ ದರ್ಶನವನ್ನು ಪದ್ಮನಾಭನಗರದ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅಂತಿಮ ದರ್ಶನ ಬಳಿಕ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಹಾಸನಕ್ಕೆ ರವಾನಿಸಿ ಅಲ್ಲಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೇವೇಗೌಡರ ಹುಟ್ಟೂರು ಹರದನಹಳ್ಳಿಯಲ್ಲಿ ಅಂತ್ಯಕ್ರಿಯೆ ಸಾಧ್ಯತೆ ಎನ್ನಲಾಗಿದೆ.
ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ಹುಟ್ಟೂರಿನ ಪ್ರೀತಿ ಎಂಥದ್ದು.!
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ ಹಿನ್ನೆಲೆ ಹುಟ್ಟೂರು ಮುತ್ತಿಗೆ ಹಿರಿಹಳ್ಳಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಮುತ್ತಿಗೆಹಿರಿಹಳ್ಳಿ ಗ್ರಾಮದೆಲ್ಲೆಡೆ ಶೋಕದ ವಾತಾವರಣ ನಿರ್ಮಾಣವಾಗಿದ್ದು ಜನರು ಕಂಬನಿ ಮಿಡಿದಿದ್ದಾರೆ. ಮುತ್ತಿಗೆಹಿರಿಹಳ್ಳಿಯಿಂದ ಹರದನಹಳ್ಳಿಗೆ ಚೆನ್ನಮ್ಮ ಅವರನ್ನು ಮದುವೆ ಮಾಡಿಕೊಡಲಾಗಿತ್ತು, ಮದುವೆಯಾದ ಬಳಿಕವೂ ಚೆನ್ನಮ್ಮ ಅವರು ತವರುಮನೆಯ ಮೇಲೆ ಹೆಚ್ಚಿನ ಪ್ರೀತಿ ಹೊಂದಿದ್ದರು. ತವರು ಮನೆಯ ಗ್ರಾಮದವರೂ ಹೆಚ್ಚಿನ ಪ್ರೀತಿ ಇಟ್ಟುಕೊಂಡಿದ್ದರು, ಇದೀಗ ಚೆನ್ನಮ್ಮ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
