H.D.DEVEGOWD WIFE CHENNNAMMA: ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಹಾಸನ ಜಿಲ್ಲೆಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆಯಿತು. ಹೊಳೆನರಸೀಪುರದ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ ನರವೇರಿತು.

ಪಕ್ಷಾತೀತವಾಗಿ ಹಿರಿಯ ನಾಯಕರು ಅಂತಿಮ ನಮನ ಸಲ್ಲಿಸಲು ಮಾವಿನಕೆರೆಯಲ್ಲಿ ಜಮಾಯಿಸಿದ್ದು ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರು ಮತ್ತು ಹಿರಿಯ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಗೌಡರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಮಠಗಳ ಧಾರ್ಮಿಕ ಮುಖಂಡರು ಮತ್ತು ಪೊಲೀಸ್ ಮಹಾನಿರ್ದೇಶಕ ಎಂ ಎ ಸಲೀಂ ಸೇರಿದಂತೆ ಹಲವು ಹಿರಿಯ ಸರ್ಕಾರಿ ಅಧಿಕಾರಿಗಳು, ಅಪಾರ ಸಂಖ್ಯೆಯ ಜನರು ಅಂತಿಮ ನಮನ ಸಲ್ಲಿಸಿದರು.
ಸಕಲ ಸರ್ಕಾರಿ ಗೌರವಗೊಳೊಂದಿಗೆ 3 ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಚೆನ್ನಮ್ಮ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಶಿವಕುಮಾರ್, ದೇವೇಗೌಡರಿಗೆ ಹಸ್ತಾಂತರಿಸಿದರು.
ದೈವಭಕ್ತೆ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಕಿರಿಯ ಮಗ ಎಚ್ ಡಿ ರಮೇಶ್ ನೆರವೇರಿಸಿದರು.
