NICE Petition: ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನೂರಾರು ರೈತರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಭೂಸ್ವಾಧೀನ ರದ್ದು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. 
ಬೆಂಗಳೂರು, ಜು.29: ಬೆಂಗಳೂರು-ಮೈಸೂರು ನಡುವಿನ 111 ಕಿ.ಮೀ ಉದ್ದದ ರಸ್ತೆಯಲ್ಲಿ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ಎಂಟರ್ ಪ್ರೈಸಸ್ ಲಿಮಿಟೆಡ್ (ನೈಸ್) ವತಿಯಿಂದ ನಿರ್ಮಿಸಲಾಗಿರುವ ಹೆದ್ದಾರಿ ಯೋಜನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶಪಡಿಸಿಕೊಂಡಿದ್ದ 300 ಎಕರೆಗೂ ಅಧಿಕ ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿತ್ತು. ಭೂಸ್ವಾಧೀನ ರದ್ದು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.
ರೈತರಿಗೆ ಬಿಗ್ ರಿಲೀಫ್
ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನೂರಾರು ರೈತರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಭೂಸ್ವಾಧೀನ ರದ್ದು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿ ಡಿಕೆ ಸಿಂಗ್ ಹಾಗೂ ನ್ಯಾಯಮೂರ್ತಿ ಟಿ.ಎಂ.ನದಾಫ್ ಅವರಿದ್ದ ವಿಭಾಗೀಯ ಪೀಠ ತೀರ್ಪು ನೀಡಿದೆ.
ಉನ್ನತ ಮಟ್ಟದ ತನಿಖೆ ಅಗತ್ಯ-HC
ರೈತರ ಪರ ಹಿರಿಯ ವಕೀಲ ಹೆಚ್.ಎನ್. ಶಶಿಧರ್ ವಾದ ಮಂಡಿಸಿದ್ದರು. ವಿಚಾರಣೆ ವೇಳೆ, ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದ ಹಲವು ಗಂಭೀರ ಅಂಶಗಳ ಬಗ್ಗೆ ಹೈಕೋರ್ಟ್ ಪ್ರಸ್ತಾಪಿಸಿದ್ದು, ನೈಸ್ ರಸ್ತೆ ನಿರ್ಮಾಣದ ವೇಳೆ ಕೆರೆಗಳು ಹಾಗೂ ಜಮೀನುಗಳನ್ನು ಅತಿಕ್ರಮಿಸಿರುವ ಆರೋಪಗಳಿವೆ, ಈ ಎಲ್ಲ ವಿಷಯಗಳ ಕುರಿತು ಉನ್ನತ ಮಟ್ಟದ ತನಿಖೆ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
