Maharastra Building Collapse: ಭಿವಂಡಿಯಲ್ಲಿ ಗುರುವಾರ ರಾತ್ರಿ 11.30 ರ ಸುಮಾರಿಗೆ ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಕುಸಿದು ಬಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಣಾ ತಂಡಗಳು ಆರು ಜನರ ಶವಗಳನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ.
ಮುಂಬೈ, ಜು.31: ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜು.30ರ ಮಧ್ಯರಾತ್ರಿ ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಕುಸಿದು ಬಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಣಾ ತಂಡಗಳು 9 ಜನರ ಶವಗಳನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ.
ಈ ಕಟ್ಟಡವು ಒಟ್ಟು 48 ಕೊಠಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 12 ಕೊಠಡಿಗಳಿವೆ. ದುರಸ್ತಿ ಕಾರ್ಯ ನಡೆಯುತ್ತಿರುವಾಗ ಈ ಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಸಹಾಯಕ ಕಮಾಂಡೆಂಟ್ ಕೂಡ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಟ್ಟಡದ ನಿವಾಸಿಗಳು ಕಟ್ಟಡದಿಂದ “ಜೋರಾಗಿ ಬಿರುಕು ಬಿಡುವ ಶಬ್ದಗಳು” ಕೇಳಿಬಂದಿವೆ ಎಂದು ಹೇಳಿದ್ದಾರೆ. ಶಬ್ದಗಳಿಂದ ಗಾಬರಿಗೊಂಡ ಸ್ಥಳೀಯರು ಹಲವಾರು ಕುಟುಂಬಗಳನ್ನು ಸ್ಥಳಾಂತರಿಸಲು ಸಹಾಯ ಮಾಡಿದರು. ಕೆಲವು ನಿವಾಸಿಗಳು ಆವರಣದಿಂದ ಹೊರಹೋಗುತ್ತಿರುವಾಗ, ಕಟ್ಟಡದ ‘ಬಿ’ ವಿಂಗ್ ಕುಸಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
