Australia vs Bangladesh: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 198 ರನ್ಗಳಿಸಿದರೆ, ಬಾಂಗ್ಲಾದೇಶ್ ತಂಡ 426 ರನ್ ಕಲೆಹಾಕಿತು. ಇನ್ನು ದ್ವಿತೀಯ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 284 ರನ್ಗಳಿಸಿ ಆಲೌಟ್ ಆಯಿತು. ಇತ್ತ ಮೊದಲ ಇನಿಂಗ್ಸ್ನಲ್ಲಿನ ಮುನ್ನಡೆಯೊಂದಿಗೆ ಕೇವಲ 57 ರನ್ಗಳ ಗುರಿ ಪಡೆದ ಬಾಂಗ್ಲಾದೇಶ ತಂಡ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

ವಿಶ್ವ ಕ್ರಿಕೆಟ್ನಲ್ಲಿ ಮತ್ತೊಂದು ಮಹತ್ತರ ಇತಿಹಾಸ ಸೃಷ್ಟಿಯಾಗಿದೆ. ಟೆಸ್ಟ್ ಕ್ರಿಕೆಟ್ನ ಬಲಿಷ್ಠ ತಂಡಗಳಲ್ಲಿ ಒಂದಾದ ಆಸ್ಟ್ರೇಲಿಯಾವನ್ನು ಅವರದ್ದೇ ತವರು ನೆಲದಲ್ಲಿ ಮಣಿಸುವುದು ಯಾವುದೇ ವಿದೇಶಿ ತಂಡಕ್ಕಾದರೂ ಅತ್ಯಂತ ಕಠಿಣ ಸವಾಲು. ಆದರೆ, ಬಾಂಗ್ಲಾದೇಶ್ ತಂಡವು ಆಸ್ಟ್ರೇಲಿಯಾ ಮಣ್ಣಿನಲ್ಲಿ ಅತ್ಯಂತ ವೇಗವಾಗಿ ಟೆಸ್ಟ್ ಗೆಲುವು ದಾಖಲಿಸಿದ ಏಷ್ಯಾದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಡಾರ್ವಿನ್ನ ಮರಾರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ನಜ್ಮುಲ್ ಹೊಸೈನ್ ಶಾಂತೊ ನಾಯಕತ್ವದ ಬಾಂಗ್ಲಾದೇಶ ತಂಡವು ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಕೇವಲ ತನ್ನ 3ನೇ ಟೆಸ್ಟ್ ಪಂದ್ಯದಲ್ಲೇ ಚೊಚ್ಚಲ ಗೆಲುವಿನ ಸಿಹಿ ಸವಿದಿದೆ.![]()
ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆಲ್ಲಲು ಏಷ್ಯಾದ ದೈತ್ಯ ತಂಡಗಳಾದ ಭಾರತ ಮತ್ತು ಪಾಕಿಸ್ತಾನ್ ದಶಕಗಳ ಕಾಲ ಕಾಯಬೇಕಾಗಿತ್ತು. ಆದರೆ ಬಾಂಗ್ಲಾದೇಶ್ ಅತ್ಯಂತ ಕಡಿಮೆ ಪಂದ್ಯಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.
ಆಸ್ಟ್ರೇಲಿಯಾದಲ್ಲಿ ತನ್ನ ಮೊದಲ ಟೆಸ್ಟ್ ಪಂದ್ಯ ಗೆಲ್ಲಲು ಟೀಮ್ ಇಂಡಿಯಾ ಬರೋಬ್ಬರಿ 12 ಪಂದ್ಯಗಳವರೆಗೆ ಕಾಯಬೇಕಾಗಿತ್ತು.
ಇದೀಗ ಬಾಂಗ್ಲಾದೇಶ ತಂಡವು ಆಸ್ಟ್ರೇಲಿಯಾ ನೆಲದಲ್ಲಿ ತಾನಾಡಿದ ಕೇವಲ 3ನೇ ಟೆಸ್ಟ್ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಅವರದ್ದೇ ತವರಿನಲ್ಲಿ ಅತ್ಯಂತ ಕಡಿಮೆ ಪಂದ್ಯಗಳಲ್ಲಿ ಮಣಿಸಿದ ಏಷ್ಯಾದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ದಾಖಲೆಯೊಂದಿಗೆ ಭಾರತ, ಪಾಕಿಸ್ತಾನ್ ನಂತರ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಮೂರನೇ ಏಷ್ಯನ್ ರಾಷ್ಟ್ರ ಎಂಬ ಕೀರ್ತಿಗೂ ಬಾಂಗ್ಲಾದೇಶ್ ಭಾಜನವಾಗಿದೆ.