CWRC: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ನವದೆಹಲಿ, ಆ.24: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದ್ದು, ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ದೆಹಲಿಯಲ್ಲಿ ಸಿಡಬ್ಲ್ಯೂಆರ್ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 141ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶದಿಂದಾಗಿ ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 12 ಸಾವಿರ ಬದಲಿಗೆ ಈಗ 9 ಸಾವಿರ ಕ್ಯೂಸೆಕ್ ನೀರು ಹರಿಸಬೇಕಾಗಿದೆ.
ಮೊದಲ ಬಾರಿಗೆ ಮೂರು ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ಆದೇಶಿಸಲಾಗಿತ್ತು. ಎರಡನೇ ಬಾರಿಗೆ 12 ಸಾವಿರ, ಈಗ ಮೂರನೇ ಬಾರಿಗೆ 9 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಲಾಗಿದೆ.
