AJJAYYA ON DK CM: ಡಿಕೆಶಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಲಿಂಗೈಕ್ಯ ವೀರಗಂಗಾಧರ ಸ್ವಾಮಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಡಿಕೆಶಿ ಮುಖ್ಯಮಂತ್ರಿ ಸ್ಥಾನದ ಕುರಿತಂತೆ ನೊಣವಿನಕೆರೆ ಅಜ್ಜಯ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2028 ರಿಂದ ಮುಂದಿನ 8-10 ವರ್ಷಗಳ ಕಾಲ ಡಿಕೆಶಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಅಂತ ನೊಣವಿನಕೆರೆ ಅಜ್ಜಯ್ಯ ಹೇಳಿದ್ದಾರೆ.

ಗದಗ, ಸೆ.02: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದ ಲಿಂಗೈಕ್ಯ ವೀರಗಂಗಾಧರ ಸ್ವಾಮಿಗಳ ಗದ್ದುಗೆಗೆ ಸಿಎಂ ಡಿಕೆ ಶಿವಕುಮಾರ್ ಭೇಟಿ, ಗದ್ದುಗೆ ದರ್ಶನ ಪಡೆದು ಪೂಜೆ ಪ್ರಾರ್ಥನೆ ಸಲ್ಲಿಸಿದರು.
ಸಿಎಂ ಆಗಬೇಕೆಂಬ ತಮ್ಮ ಪ್ರಾರ್ಥನೆ ಈಡೇರಿರುವ ಹಿನ್ನೆಲೆಯಲ್ಲಿ ಮುಕ್ತಿಮಂದಿರದಲ್ಲಿ ಅರ್ಧ ಗಂಟೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಸಿಎಂ, ಗದಗ ಜಿಲ್ಲೆಗೆ ಬರಗಾಲದ ಪ್ರವಾಸಕ್ಕೆ ಬಂದಿದ್ದೆ. ರಾಜ್ಯಾದ್ಯಂತ ಮಳೆ ಬೆಳೆ ಆಗಬೇಕು. ಗದಗ ಜಿಲ್ಲೆಯಲ್ಲಿ ಅತಿ ಹೆಚ್ಚು ಬರ ಇದೆ, ಹೀಗಾಗಿ ಇಲ್ಲೇ ಬರಬೇಕು ಅಂತ ಬಂದಿದ್ದೀನಿ ಎಂದರು.
ಎಲ್ಲಾ ಧರ್ಮನೂ ಕಾಪಾಡಬೇಕು, ಅವರವರ ಧರ್ಮ ಅವರನ್ನ ಕಾಪಾಡಬೇಕು. ಬಹಳ ವಿಶೇಷವಾಗಿ ಕಾಡಸಿದ್ದೇಶ್ವರ ಮಠದ ಶ್ರೀಗಳು, ಶಾಸಕರು, ಸ್ಥಳೀಯ ಶಾಸಕರು ಎಲ್ಲ ಬಂದಿದ್ದರು. ಬಿಲ್ಪತ್ರೆ ಹಾಕಿ ಪ್ರಾರ್ಥನೆ ಮಾಡಿದೆವು. ರಾಜ್ಯಕ್ಕೆ ಒಳ್ಳೆಯ ಮಳೆ ಬೆಳೆ ಆಗಬೇಕು ಅಂತ ಪ್ರಾರ್ಥನೆ ಮಾಡಿದ್ದೀನಿ ಎಂದು ತಿಳಿಸಿದರು.
ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಜ್ಜಯ್ಯ, ಡಿಕೆಶಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಡಿಕೆಶಿ ಮುಖ್ಯಮಂತ್ರಿ ಸ್ಥಾನದ ಕುರಿತಂತೆ ನೊಣವಿನಕೆರೆ ಅಜ್ಜಯ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2028 ರಿಂದ ಮುಂದಿನ 8-10 ವರ್ಷಗಳ ಕಾಲ ಡಿಕೆಶಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಅಂತ ನೊಣವಿನಕೆರೆ ಅಜ್ಜಯ್ಯ ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಆರೋಗ್ಯ, ಆಯುಷ್ಯ ಹಾಗೂ ಮುಂದಿನ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದಾರೆ. ಅಷ್ಟೋತ್ತರ ಪೂಜೆ, ಆರೋಗ್ಯ ಭಾಗ್ಯದ ಸಂಕಲ್ಪ ಮಾಡಿದ್ದಾರೆ. ರಾಜಾ ಪ್ರತ್ಯಕ್ಷ ದೇವತಾ ಮುಂದಿನ 2028 ರಿಂದ ಆಳ್ವಿಕೆಯಲ್ಲಿ ಡಿಕೆಶಿ ಇರುವಂತೆ ಪೂಜೆ ಮಾಡಿದ್ದೇನೆ.
