NEW CEO ELECTED RAMAMANDIRA TRUST: ರಾಮಮಂದಿರ ಟ್ರಸ್ಟ್ಗೆ ಮೊದಲ CEO ನೇಮಕ; ‘ಆಪರೇಷನ್ ಸಿಂಧೂರ್’ನಲ್ಲಿ ಭಾಗಿಯಾಗಿದ್ದ ಜಿತೇಂದ್ರ ಮಿಶ್ರಾ ಹೆಸರು ಘೋಷಣೆ! ಭಾರತೀಯ ವಾಯುಪಡೆಯಲ್ಲಿ ಹಲವಾರು ಕಮಾಂಡಿಂಗ್ ಹುದ್ದೆಗಳನ್ನು ಹೊಂದಿದ್ದ ಮಿಶ್ರಾ ಅವರು, ಆಪರೇಷನ್ ಸಿಂಧೂರ್ ಸಮಯದಲ್ಲಿ ಪಶ್ಚಿಮ ಕಮಾಂಡ್ನ ಮುಖ್ಯಸ್ಥರಾಗಿದ್ದರು.

ಲಖನೌ, ಸೆ.02: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ಗೆ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ನೇಮಕ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಮತ್ತು ಉನ್ನತ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು.
ರಾಮ ಮಂದಿರ ಟ್ರಸ್ಟ್ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿಗಳು ಬಂದಿದ್ದು, ಈ ಪೈಕಿ ಕೇವಲ 20 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನ ಸುತ್ತಿಗೆ ಆಯ್ಕೆ ಮಾಡಲಾಗಿದೆ.
ಸಂದರ್ಶನದ ನಂತರ ರಾಮ ಮಂದಿರ ಟ್ರಸ್ಟ್ಗೆ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಆಯ್ಕೆ ಮಾಡಲಾಗಿದೆ.
