T.A.SHARAVANA CONGRATULATIONS: ಕನ್ನಡ ಚಿತ್ರರಂಗದ ಗರಿಮೆ, ಮೇರು ನಟ ಶ್ರೀ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ -2024’ ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ಕ್ಷಣ.
ಬೆಂಗಳೂರು, ಸೆ.16: ಚಿತ್ರರಂಗಕ್ಕೆ ನೀಡಿದ ಅನುಪಮ ಕೊಡುಗೆಗಾಗಿ ಕೇಂದ್ರ ಸರ್ಕಾರವು ಹಿರಿಯ ನಟ ಅನಂತ್ ನಾಗ್ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಿದ್ದು ತುಂಬಾ ಸಂತೋಷವಾಗಿದೆ ಎಂದು ಜೆಡಿಎಸ್ ವಿಧಾನಪರಿಷತ್ ಜೆಡಿಎಸ್ ಸದಸ್ಯ ಟಿ.ಎ.ಶರವಣ ಹರ್ಷ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದ ಗರಿಮೆ, ಮೇರು ನಟ ಶ್ರೀ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ -2024’ ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ಕ್ಷಣ. ತಮ್ಮ ನೈಜ ನಟನೆ, ಸಂಯಮ ಹಾಗೂ ವಿಶಿಷ್ಟ ಪಾತ್ರಗಳ ಮೂಲಕ ದಶಕಗಳ ಕಾಲ ಭಾರತೀಯ ಕಲಾರಂಗವನ್ನು ಶ್ರೀಮಂತಗೊಳಿಸಿದ ಅನಂತ್ ನಾಗ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.
