Chikkamagaluru: Woman raped under the pretext of exorcism; How was priest Satish, who was absconding, caught? -
Chikkamagaluru: ಭೂತ ಬಿಡಿಸೋ ನೆಪದಲ್ಲಿ ಮಹಿಳೆ ಮೇಲೆ ದೌರ್ಜನ್ಯ; ತಲೆ ಮರೆಸಿಕೊಂಡಿದ್ದ ಅರ್ಚಕ ಸತೀಶ್ ಸಿಕ್ಕಿಬಿದ್ದಿದ್ದು ಹೇಗೆ?
ಚಿಕ್ಕಮಗಳೂರು ಅ.12 ರಂದು ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ವೆಸಗಿದ್ದ (Assault) ಅರ್ಚಕ ಸತೀಶ್ ಪಾತ್ರಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಚಿಕ್ಕಮಗಳೂರಿನಲ್ಲೂ ಸಹ ಮಹಿಳೆಯ ಮೂಢ ನಂಬಿಕೆಯನ್ನೇ ಬಳಸಿಕೊಂಡ ವ್ಯಕ್ತಿಯೊಬ್ಬ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ (Rape) ಎಸಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ಮಹಿಳೆಯ ದೂರಿನ ಮೇರೆಗೆ ಆರೋಪಿ ಸತೀಶ್ ಪಾತ್ರಿಯನ್ನು ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ.
ಆರೋಪಿ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್…?
ಭೂತ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಒಂದೂವರೆ ತಿಂಗಳ ಬಳಿಕ ಆರೋಪಿ ಅರ್ಚಕ ಸತೀಶ್ ಪಾತ್ರಿ ಸಿಕ್ಕಿಬಿದ್ದಿದ್ದಾನೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಪ್ಪ ಪೊಲೀಸರು, ಬೆಂಗಳೂರಿನ ಜೆಪಿ ನಗರದಲ್ಲಿ ಸತೀಶ್ ಪಾತ್ರಿಯನ್ನ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆದಿದೆ.
ಪೊಲೀಸ್ ಠಾಣೆಯಲ್ಲಿ ದೂರು ದಾಖಲು..?
ಸಂತ್ರತೆಯ ದೂರಿನ ಮೇರೆಗೆ ಎನ್.ಆರ್. ಪುರ ಠಾಣೆಯಲ್ಲಿ ಮೌಢ್ಯ ಪ್ರತಿಬಂಧಕ (ಬ್ಲಾಕ್ ಮ್ಯಾಜಿಕ್) ಕಾಯ್ದೆಯಡಿ ಮತ್ತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಈಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಏನಿದು ಕೇಸ್?
ಭೂತ, ಪ್ರೇತ ಬಿಡಿಸೋ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿರುವ ಆರೋಪ ಕೇಳಿ ಬಂದಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಶೀಕರಣದ ಹೆಸರಿನಲ್ಲಿ ಕೋಳಿಯನ್ನು ನೀಡಿ ರಕ್ತ ಕುಡಿಯುವಂತೆ ಯುವತಿಗೆ ಒತ್ತಾಯಿಸಿದ್ದಾರೆ ಎನ್ನುವ ಆರೋಪವಿದ್ದು, ವಿಡಿಯೋ ವೈರಲ್ ಆಗಿತ್ತು.
ವಶೀಕರಣದ ಹೆಸರಲ್ಲಿ ವಂಚನೆ ಆರೋಪ..?
ದೈವಾರಾಧನೆ, ವಶೀಕರಣದ ಹೆಸರಲ್ಲಿ ವಂಚನೆ ಆರೋಪ ಕೇಳಿಬಂದಿದೆ. ಯುವತಿ ರಕ್ತಾಹಾರ ಸ್ವೀಕರಿಸದಿದ್ರೆ ಕರ್ಪೂರ ಬಾಯಲ್ಲಿ ಇಡೋದಾಗಿಯೂ ಬೆದರಿಕೆ ಹಾಕಿದ್ದಲ್ಲದೆ ಬಾಳೆ ಎಲೆಯ ಮೇಲೆ ಅವಲಕ್ಕಿ ಇಟ್ಟು ಸಂಪೂರ್ಣವಾಗಿ ತಿನ್ನುವಂತೆ ಬೆದರಿಸಿದ ವಿಡಿಯೋ ಇದೀಗ ವೈರಲ್ ಆಗಿತ್ತು.
ಯುವತಿಯನ್ನ ಹೆದರಿಸುತ್ತಿರೋ ವಿಡಿಯೋ ವೈರಲ್..?
ಕೊಪ್ಪದ ಮೇಕನಹಡ್ಲು ಸತೀಶ್ ಪಾತ್ರಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಯುವತಿಯನ್ನು ಹಿಡಿದು ಹೆದರಿಸುತ್ತಿರೋ ವಿಡಿಯೋ ವೈರಲ್ ಆಗಿದ್ದು, ಸತೀಶ್ ಪಾತ್ರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದರು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಅನೇಕು ಆಕ್ರೋಶ ವ್ಯಕ್ತಪಡಿಸಿದ್ರು.
