DKS -BYV talk fight: 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದ ಬಿವೈ ವಿಜಯೇಂದ್ರ. ಎಲ್ಲರನ್ನೂ ಕರೆದುಕೊಂಡು ಹೋಗುವಂತೆ ವ್ಯಂಗ್ಯವಾಡಿದ ಸಿಎಂ ಡಿಕೆ ಶಿವಕುಮಾರ್. ಕಾಂಗ್ರೆಸ್ ಶಾಸಕರ ಬಿಜೆಪಿ ಸೇರ್ಪಡೆ ಸಾಧ್ಯತೆ ಬಗ್ಗೆ ಸಿಎಂ “ಡೋಂಟ್ ಕೇರ್” ನಿಲುವು.
![]()
ಬೆಂಗಳೂರು, ಅ.13: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷ ನಾಯಕರ ನಡುವಿನ ವಾಕ್ಸಮರ ಯಾವಾಗಲೂ ರೋಚಕವಾಗಿರುತ್ತದೆ. ಅದರಲ್ಲೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ, ಇದು ಮತ್ತೊಂದು ಹಂತವನ್ನು ತಲುಪಿದೆ. ಅದರಂತೆ 25 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದು, ಇದಕ್ಕೆ ಸಿಎಂ ಡಿಕೆಶಿ ಅವರೆಲ್ಲರನ್ನೂ ಈಗಲೇ ಕರೆದುಕೊಂಡು ಹೋಗುವಂತೆ ವ್ಯಂಗ್ಯವಾಡಿದ್ದಾರೆ.
ಒಂದು ವೇಳೆ ಈಗಲೇ ಚುನಾವಣೆ ನಡೆದರೆ, ಸಚಿವರು ಸೇರಿದಂತೆ 25 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ” ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ವ್ಯಂಗ್ಯವಾಡಿರುವ ಸಿಎಂ ಡಿ.ಕೆ. ಶಿವಕುಮಾರ್, ಯಾವುದೇ ಕಾಲಹರಣ ಮಾಡದೆ ಆ ನಾಯಕರನ್ನು ಈಗಲೇ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಸವಾಲು ಹಾಕಿದ್ದಾರೆ.
ಹೌದು, “ಯಾವುದೇ ಕ್ಷಣದಲ್ಲಿ ಚುನಾವಣೆ ನಡೆದರೂ, ಕಾಂಗ್ರೆಸ್ನ 25 ಶಾಸಕರು ಬಿಜೆಪಿಗೆ ಸೇರ್ಪಡೆ ಆಗುತ್ತಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಆಡಳಿತ ಪಕ್ಷದ ಸಚಿವರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ರಾಜ್ಯದಲ್ಲಿನ ಜನಮತ ಬಿಜೆಪಿ ಪರವಾಗಿ ಬದಲಾಗಿದೆ ಮತ್ತು ಅನೇಕ ಕಾಂಗ್ರೆಸ್ ನಾಯಕರು ಪಕ್ಷ ಬದಲಾಯಿಸಲು ಸಿದ್ಧರಿದ್ದಾರೆ” ಎಂದು ಹೇಳಿದರು.
“ನಮಗೆ ಸಚಿವರನ್ನು ಸೆಳೆಯುವ ಅಗತ್ಯವಿಲ್ಲ. ಆದರೆ ಪಕ್ಷದ ರಾಜ್ಯ ಅಧ್ಯಕ್ಷನಾಗಿ ನಾನು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಬಲ್ಲೆ, ನಾಳೆಯೇ ಚುನಾವಣೆ ಘೋಷಣೆಯಾದರೂ, ಡಿ.ಕೆ. ಶಿವಕುಮಾರ್ ಅವರ ಸಂಪುಟದ ಸಚಿವರು ಸೇರಿದಂತೆ 25 ಶಾಸಕರು ಬಿಜೆಪಿ ಸೇರಲಿದ್ದಾರೆ. ಅಂತಹ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ” ಎಂದು ಬಿವೈ ವಿ ಸುದ್ದಿಗಾರರಿಗೆ ತಿಳಿಸಿದರು.
