Hiriyuru by-election: Congress strategy to retain the constituency, who will get the ticket? ಹಿರಿಯೂರು ಉಪ ಚುನಾವಣೆಯ ಘೋಷಣೆಗೂ ಮುನ್ನವೇ ಬೆಳವಣಿಗೆಗಳು ಶುರುವಾಗಿವೆ. ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ನಡೆಸುತ್ತಿವೆ. ಹೀಗಾಗಿ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಡಿಕೆ ಶಿವಕುಮಾರ್ ಅವರಿಗೂ ಈ ಚುನಾವಣೆ ಪ್ರತಿಷ್ಠೆಯಾಗಿದೆ. ಮತ್ತೊಂದು ಕಡೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ಅವರಿಗೂ ಇದು ಮಹತ್ವದ ಉಪ ಚುನಾವಣೆಯಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ.
- ಹಿರಿಯೂರು ಉಪ ಚುನಾವಣೆಯ ಘೋಷಣೆಗೂ ಮುನ್ನವೇ ಬೆಳವಣಿಗೆಗಳು ಶುರು.
- ಹಿರಿಯೂರು ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಏನೆಲ್ಲಾ ರಣತಂತ್ರ.
- ಸಿಎಂ ಡಿಕೆ ಶಿವಕುಮಾರ್ ಅವರಿಗೂ ಈ ಉಪ ಚುನಾವಣೆ ಪ್ರತಿಷ್ಠೆಯಾಗಿದೆ.
![]()
ಬೆಂಗಳೂರು: ಡಿ ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ದಗೊಳ್ಳುತ್ತಿದೆ. ಚುನಾವಣಾ ಘೋಷಣೆಗೂ ಮುನ್ನವೇ ಟಿಕೆಟ್ ಹಾಗೂ ಇನ್ನಿತರ ವಿಚಾರಗಳ ಕುರಿತಾಗಿ ಚರ್ಚೆಗಳು ಶುರುವಾಗಿವೆ. ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ.
ಶುಕ್ರವಾರ ಸಭೆ: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಗೂ ಮುನ್ನವೇ ಆಡಳಿತಾರೂಢ ಕಾಂಗ್ರೆಸ್ ತಯಾರಿ ಆರಂಭಿಸಿದ್ದು, ಅ.16 ಶುಕ್ರವಾರ ಮಹತ್ವದ ಸಭೆ ಕರೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷಬಿ.ಕೆ.ಹರಿಪ್ರಸಾದ್ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ.
ಸಭೆಯಲ್ಲಿ ಚಿತ್ರದುರ್ಗ ಡಿಸಿಸಿ ಅಧ್ಯಕ್ಷರು, ಕೆಪಿಸಿಸಿ ಮತ್ತು ಬಿಸಿಸಿ ವೀಕ್ಷಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಜಿಪಂ ಮತ್ತು ತಾಪಂ ಸದಸ್ಯರು, ನಗರಸಭೆ ಮಾಜಿ ಸದಸ್ಯರು ಹಾಗೂ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಸಚಿವರಾಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಸದ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲಿದೆ. ತಮ್ಮದೇ ಪಕ್ಷದ ಹಿಡಿತದಲ್ಲಿದ್ದ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಈ ಸಿದ್ಧತೆಯ ಭಾಗವಾಗಿ ಸಭೆ ಕರೆಯಲಾಗಿದೆ.
ಯಾರಿಗೆ ಟಿಕೆಟ್?
ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ದಿವಂಗತ ಶಾಸಕ ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಸುಧಾಕರ್ ಅವರಿಗೆ ನೀಡಬೇಕು ಎಂಬ ಬೇಡಿಕೆ ಇದೆ. ಕುಟುಂಬದ ರಾಜಕೀಯ ಹಿನ್ನೆಲೆಯಲ್ಲಿ ಇವರಿಗೆ ಟಿಕೆಟ್ ನೀಡಬೇಕೆಂಬ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಡೆದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಹಿರಿಯೂರಿನಲ್ಲೂ ಇದೇ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ. ದಿವಂಗತ ಸುಧಾಕರ್ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಾಗಿದೆ.
ಕೆಲವೊಬ್ಬರು ಆಕಾಂಕ್ಷಿಗಳು ಟಿಕೆಟ್ಗಾಗಿ ಪ್ರಯತ್ನ ನಡೆಸುತ್ತಿದ್ದರೂ, ಅಂತಿಮ ಆಯ್ಕೆಯನ್ನು ಕಾಂಗ್ರೆಸ್ ನಾಯಕರು ಮಾಡಲಿದ್ದಾರೆ. ಈ ನಡುವೆ ಸಿಎಂ ಡಿಕೆ ಶಿವಕುಮಾರ್ ಕೂಡಾ ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡುವ ನಿಟ್ಟಿನಲ್ಲಿ ಉತ್ಸುಕರಾಗಿದ್ದಾರೆ. ಹಾಗಾಗಿ ಈಗಾಗಲೇ ತೆರೆಮರೆಯಲ್ಲಿ ಸಿದ್ದತೆಗಳು ನಡೆಯುತ್ತಿದೆ.
ಹಿರಿಯೂರು ಬಿಜೆಪಿ ಅಭ್ಯರ್ಥಿ ಯಾರು?
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬುವುದು ಅಂತಿಮಗೊಂಡಿಲ್ಲ. ಈ ನಿಟ್ಟಿನಲ್ಲಿ ಎನ್ಡಿಎ ನಾಯಕರ ಸಭೆ ನಡೆದಿದೆ. ಸಭೆಯಲ್ಲಿ ಸಂಭಾವ್ಯ ಪಟ್ಟಿ ಸಿದ್ದಪಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಜವಾಬ್ದಾರಿ ನೀಡಲಾಗಿದೆ.
