Karnataka Rain: Heavy rain with wind speed of 30-40KM per hour; Alert for these districts of the state – ರಾಜ್ಯಕ್ಕೆ ಹಿಂಗಾರು ಮಳೆಯ ಪ್ರವೇಶವಾಗಿದ್ದು, ಭಾರೀ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ.
1/9

ಈ ಬಾರಿ ಮುಂಗಾರು ಮಳೆ ಸರಿಯಾಗಿ ಆಗದೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ನಗರಕ್ಕೆ ಹಿಂಗಾರು ಮಳೆಯ ಪ್ರವೇಶವಾಗಿದ್ದು, ಅ.18ರವರೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನ ಕೇಂದ್ರ ಹವಾಮಾನ ಇಲಾಖೆ ನೀಡಿದೆ.
2/9

ಮುಂದಿನ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಆಗಾಗ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
3/9

ಮಳೆಯಿಂದ ನಗರದ ತಾಪಮಾನ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ. ಕೆಲವೆಡೆ ಹಗುರ ಮಳೆಯಾಗಿದೆ. ಈ ಬಾರಿ ಹಿಂಗಾರು ಬುಧವಾರ ನಗರ ಮತ್ತು ಗ್ರಾಮಾಂತರ ಭಾಗದ ಮಳೆ ಕೂಡ ಶೇ.30ರಷ್ಟು ಕೊರತೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆಯನ್ನು ನೀಡಿದೆ.
4/9

ವಾಯುಭಾರ ಕುಸಿತ: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತವಾಗಿದ್ದು, ಹಿಂಗಾರು ಮಳೆಗೆ ಪೂರಕ ವಾತಾವರಣವನ್ನು ಒದಗಿಸಿದೆ. ಅಕ್ಟೋಬರ್ ತಿಂಗಳಲ್ಲಿ 15 ರಿಂದ 22ರವರೆಗೂ ಮಳೆ ಆಗುವ ಸಾಧ್ಯತೆ ಇದೆ.
5/9

ಈಗಾಗಲೇ ತಮಿಳುನಾಡು, ಆಂಧ್ರಪ್ರದೇಶದ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಳೆ ವಿವಿಧೆಡೆ ಹಿಂಗಾರು ಆರಂಭವಾಗಿದ್ದು,ಗುರುವಾರದಿಂದ ಕರ್ನಾಟಕದಲ್ಲಿ ಹಿಂಗಾರು ಮಳೆಯಾಗೋ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
6/9

ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಅಕ್ಟೋಬರ್ 15 ರಿಂದ ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯು ಈಗಾಗಲೇ ಹಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.
7/9

ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ ಮತ್ತು ಕೋಲಾರ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.
8/9

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಉತ್ತರ ಒಳನಾಡಿನ ಭಾಗಗಳಲ್ಲಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ನಂತರ ಮತ್ತು ರಾತ್ರಿಯ ವೇಳೆಗೆ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
9/9

ಅಕ್ಟೋಬರ್ 15ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಬಹುದು. ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
