karnataka new governor oathing ceremony : ನಿರ್ಗಮಿತ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರು. ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಸುಧಾ ಯಾದವ್.

ಬೆಂಗಳೂರು, ಅ.16: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರು ಇಂದು ಶುಕ್ರವಾರ ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ನಿರ್ಗಮಿತ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರು. ಸುಧಾ ಯಾದವ್ ಅವರು ಕರ್ನಾಟಕದ ರಾಜ್ಯಪಾಲ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆಯಾಗಿದ್ದಾರೆ. ಇದಕ್ಕೂ ಮೊದಲು ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು.
