H.D. KUMARASWAMY: `Congress-CJP are the same’ – HDK hits back at Priyank by showing video- VIDEO..? – ಬೆಂಗಳೂರು : ಕರ್ನಾಟಕ ರಾಜಕೀಯ ಅಂಗಳದಲ್ಲಿ ಭಾರೀ ಸಂಚಲನ ಮೂಡಿಸಿರುವ ಸ್ಟಿಂಗ್ ಕಾರ್ಯಾಚರಣೆ ವಿವಾದದ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ವಿಡಿಯೋವೊಂದನ್ನು ಪ್ರದರ್ಶಿಸಿ, ಗೃಹ ಸಚಿವರೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ ಎಂದು ಗಂಭೀರ ದೂರನ್ನು ಮುಂದಿಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ತುಣುಕನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ತಮ್ಮ ಪರವಾಗಿ ಗಲಾಟೆ ಅಥವಾ ಪ್ರತಿಭಟನೆ ನಡೆಸುವವರ ವಿರುದ್ಧ ಪೊಲೀಸರು ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಅಭಯ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ”ನೀವೇನು ಬೇಕಾದರೂ ಗಲಾಟೆ ಮಾಡಿ, ನಿಮ್ಮ ಮೇಲೆ ಪೊಲೀಸರು ಕ್ರಮ ಕೈಗೊಳ್ಳುವುದಿಲ್ಲ ಎಂದು ಸಿಜೆಪಿ ಪರವಾಗಿ ಸಚಿವರು ಬಹಿರಂಗವಾಗಿ ಬೆಂಬಲ ಸೂಚಿಸಿದ್ದಾರೆ ಎಂದು ಅವರು ದೂರಿದರು.
‘ಕಾಂಗ್ರೆಸ್ ಮತ್ತು ಸಿಜೆಪಿ ಎರಡೂ ಒಂದೇ ಎಂದು ಸ್ವತಃ ಗೃಹ ಸಚಿವರೇ ಹೇಳಿಕೊಂಡಿದ್ದಾರೆ. ಸಿಜೆಪಿ ಚಟುವಟಿಕೆಗಳಿಗೆ ರಾಜ್ಯದಿಂದಲೇ ಅನುದಾನ ರವಾನೆಯಾಗುತ್ತಿದೆ, ಕರ್ನಾಟಕದ ಜನರ ತೆರಿಗೆ ಹಣವನ್ನು ಲೂಟಿ ಮಾಡಿ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರಲು ಬಳಸಲಾಗುತ್ತಿದೆ ಎಂದು ನೇರ ಆರೋಪ ಮಾಡಿದ್ದಾರೆ.
