Mysore Yuva dassera-sandalwood nights: ಕನ್ನಡ ಚಿತ್ರರಂಗದ ಖ್ಯಾತ ಗಾಯಕ, ಗಾಯಕಿಯರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ಚಂದನ್ ಶೆಟ್ಟಿ, ಆಲೋಕ್, ಐಶ್ವರ್ಯ ರಂಗರಾಜನ್ ಸೇರಿದಂತೆ ಕನ್ನಡದ ಹಲವು ಪ್ರಸಿದ್ಧ ಗಾಯಕರು ಮತ್ತು ಗಾಯಕಿಯರು ಸ್ಯಾಂಡಲ್ವುಡ್ ನೈಟ್ಸ್ ಕಾರ್ಯಕ್ರಮದಲ್ಲಿ ರಂಜಿಸಲಿದ್ದಾರೆ.
ಮೈಸೂರು, ಅ.16: ಮೈಸೂರು ದಸರಾ 2026ರ ಅಂಗವಾಗಿ ಯುವ ದಸರಾ ವೇದಿಕೆಯಲ್ಲಿ ಸ್ಯಾಂಡಲ್ವುಡ್ ನೈಟ್ಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ಗಾಯಕ, ಗಾಯಕಿಯರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ಚಂದನ್ ಶೆಟ್ಟಿ, ಆಲೋಕ್, ಐಶ್ವರ್ಯ ರಂಗರಾಜನ್ ಸೇರಿದಂತೆ ಕನ್ನಡದ ಹಲವು ಪ್ರಸಿದ್ಧ ಗಾಯಕರು ಮತ್ತು ಗಾಯಕಿಯರು ಭಾಗವಹಿಸಿ ತಮ್ಮ ಸಂಗೀತ ಪ್ರದರ್ಶನದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

ಯುವ ದಸರಾ ವೇದಿಕೆಯಲ್ಲಿ ಸ್ಯಾಂಡಲ್ವುಡ್ ನೈಟ್ಸ್ ಕಾರ್ಯಕ್ರಮ ಮಾತ್ರ ನಡೆಯಲಿದ್ದು, ಯಾವುದೇ ಪೂರಕ (ಫಿಲ್ಲರ್) ಕಾರ್ಯಕ್ರಮಗಳು ಇರುವುದಿಲ್ಲ. ಈ ಕುರಿತು ಸಾರ್ವಜನಿಕರು ಯಾವುದೇ ಅನಧಿಕೃತ ಮಾಹಿತಿ ಅಥವಾ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಪ್ರಕಟಣೆಯನ್ನೇ ಪರಿಗಣಿಸಬೇಕಾಗಿ ವಿನಂತಿಸಲಾಗಿದೆ.
ಮೈಸೂರು ಜಿಲ್ಲಾಡಳಿತದ ನೇತೃತ್ವದಲ್ಲಿ ಹಾಗೂ ಯುವ ದಸರಾ ಉಪಸಮಿತಿಯ ವತಿಯಿಂದ ಆಯೋಜಿಸಲಾಗಿರುವ ಈ ಸಂಗೀತ ಕಾರ್ಯಕ್ರಮದಲ್ಲಿ ಮೈಸೂರಿನ ಸಮಸ್ತ ನಾಗರಿಕರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಯುವ ದಸರಾ ಉಪಸಮಿತಿಯು ಮನವಿ ಮಾಡಿದೆ.
