HDK prepares for another round of fight against sting operation after Vijayadashami: What is the plan this time? – ವಿಜಯ ದಶಮಿ ಬಳಿಕ ಸ್ಟಿಂಗ್ ಆಪರೇಷನ್ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಕುರಿತಾಗಿ ಅವರು ಸುಳಿವು ನೀಡಿದ್ದಾರೆ. ಸ್ಟಿಂಗ್ ಆಪರೇಷನ್ ವಿಚಾರವಾಗಿ ಅವರು ಬೆಂಗಳೂರು ನಗರ ಕಮಿಷನರ್ ಕಚೇರಿಗೆ ಭೇಟಿ ನೀಡಿ ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಈ ಬಾರಿಯ ಪ್ಲ್ಯಾನ್ ಏನು? ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮತ್ತಷ್ಟು ಮಾಹಿತಿ ಇಲ್ಲಿದೆ.
ವಿಜಯ ದಶಮಿ ಬಳಿಕ ಸ್ಟಿಂಗ್ ಆಪರೇಷನ್ ವಿರುದ್ಧ ಮತ್ತೊಂದು ಸುತ್ತಿನ ಹೋರಾಟ.
ಸ್ಟಿಂಗ್ ಸೂತ್ರಧಾರಿಯ ವಿರುದ್ಧ ಕ್ರಮಕ್ಕೆ ಜೆಡಿಎಸ್ ನಾಯಕರ ಆಗ್ರಹ.
ರಾಜ್ಯಾಧ್ಯಂತ ಹೋರಾಟ ಸಂಘಟಿಸಲು ಜೆಡಿಎಸ್ ನಿಂದ ಸಿದ್ದತೆ.
ಬೆಂಗಳೂರು: ವಿಜಯ ದಶಮಿ ಬಳಿಕ ಸ್ಟಿಂಗ್ ಆಪರೇಷನ್ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಸಿದ್ಧತೆ ಮಾಡುತ್ತಿದ್ದಾರೆ. ಸ್ಟಿಂಗ್ ಮಾಡಿದವರ ಬಂಧನಕ್ಕೆ ಕುಮಾರಸ್ವಾಮಿ ಡೆಡ್ಲೈನ್ ನೀಡಿದ್ದು, ವಿಜಯದಶಮಿ ಹಬ್ಬದವರೆಗೆ ಬಂಧನಕ್ಕೆ ಗಡುವು ನೀಡಿದ್ದಾರೆ.
ಗಡುವಿನೊಳಗೆ ಬಂಧನವಾಗದಿದ್ದರೆ ಸ್ಟಿಂಗ್ ಮಾಡಿದವರ ಬಂಧನಕ್ಕೆ ಆಗ್ರಹಿಸಿ ಸತ್ಯಾಗ್ರಹಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಅದೇ ರೀತಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆಗೆ ದಳಪತಿಗಳು ಪ್ಲ್ಯಾನ್ ಮಾಡಿಕೊಂಡಿದ್ದಾರೆ.ಸ್ಟಿಂಗ್ ಆಪರೇಷನ್ ಕುರಿತಾಗಿ ಜೆಡಿಎಸ್ ಹಾಗೂ ಎಚ್ಡಿಕ ಕುಮಾರಸ್ವಾಮಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಬಳಿ ಧರಣಿ ನಡೆಸಿದ್ದರು. ಸ್ಟಿಂಗ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ, ವಿಡಿಯೋ ಶೇರ್ ಮಾಡಿದ ಆರೋಪದಡಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡ ವಿಚಾರವಾಗಿ ಪೊಲೀಸರ ನಡೆಯನ್ನು ತರಾಟೆಗೆ ತೆಗೆದುಕೊಂಡಿದ್ದರು.
ಇದೀಗ ಡಿಜಿ-ಐಜಿಪಿ ಕಚೇರಿವರೆಗೆ ಪಾದಯಾತ್ರೆ ಮಾಡಲು ದಳಪತಿಗಳು ಮುಂದಾಗಿದ್ದಾರೆ. ಈಗ ಮತ್ತೊಂದು ಹಂತದ ಹೋರಾಟಕ್ಕೆ ಕುಮಾರಸ್ವಾಮಿ ತಂತ್ರ ರೂಪಿಸುತ್ತಿದ್ದಾರೆ. ಸ್ಟಿಂಗ್ ವಿವಾದದಲ್ಲಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಜೆಡಿಎಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ.
ರಾಜ್ಯಾದ್ಯಂತ ಹೋರಾಟ: ಸ್ಟಿಂಗ್ ಆಪರೇಷನ್ ವಿಚಾರವಾಗಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಹೋರಾಟಕ್ಕೆ ಜೆಡಿಎಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜೆಡಿಎಸ್ ಹಾಲಿ-ಮಾಜಿ ಶಾಸಕರು, ಮುಖಂಡರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಮೂಲಕ ಸ್ಟಿಂಗ್ ಸೂತ್ರಧಾರರ ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಎಚ್ಡಿಕೆ ಮುಂದಾಗಿದ್ದಾರೆ. ಹಾಗಾಗಿ ವಿಜಯದಶಮಿ ಬಳಿಕ ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.ಸ್ಟಿಂಗ್ ವಿರುದ್ಧ ಸಮರ: ಸ್ಟಿಂಗ್ ವಿರುದ್ಧ ಎಚ್ಡಿಕೆ ತಮ್ಮ ಸಮರವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಈಗಾಗಲೇ ಕಾಂಗ್ರೆಸ್ ವಿರುದ್ಧ ನಾನಾ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಸಿಎಂ ಡಿಕೆ ಶಿವಕುಮಾರ್ ವಿರುದ್ಧ ನೇರವಾಗಿ ಆರೋಪಗಳನ್ನು ಮಾಡಿದ್ದಾರೆ. ಹೀಗಾಗಿ ಸ್ಟಿಂಗ್ ಸೂತ್ರಧಾರರನ್ನು ಬಂಧನ ಮಾಡಲೇ ಬೇಕು ಎಂಬುವುದು ಕುಮಾರಸ್ವಾಮಿ ಆರೋಪವಾಗಿದೆ.
ಹೀಗಿರುವಾಗ ಜೆಡಿಎಸ್ ಹೋರಾಟ ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಡುವ ಸಾಧ್ಯತೆ ದಟ್ಟವಾಗಿದೆ. ಆದರೆ, ಇದಕ್ಕೆ ಸರ್ಕಾರ ಯಾವ ರೀತಿಯಲ್ಲಿ ತಿರುಗೇಟು ನೀಡಲಿದೆ ಎಂಬುವುದು ಸದ್ಯದ ಕುತೂಹಲವಾಗಿದೆ.
ಸ್ಟಿಂಗ್ ಆಪರೇಷನ್ ವಿಚಾರವಾಗಿ ಎಚ್ಡಿ ಕುಮಾರಸ್ವಾಮಿ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದ್ಯಾ? ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ನಲ್ಲಿ ಹಂಚಿಕೊಳ್ಳಿ.