Dharwad: Forest Department employee commits suicide! – ಧಾರವಾಡ ಅ.25: ಧಾರವಾಡದಲ್ಲಿ ಅರಣ್ಯ ಇಲಾಖೆಯ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಕುಮಾರೇಶ್ವರ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ವಿಠ್ಠಲ್ ಜೋನಿ (38) ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಧಾರವಾಡ ಅ.25: ಧಾರವಾಡದಲ್ಲಿ ಅರಣ್ಯ ಇಲಾಖೆಯ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಕುಮಾರೇಶ್ವರ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ವಿಠ್ಠಲ್ ಜೋನಿ (38) ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ವಿಠ್ಠಲ್ ಜೋನಿ ಅವರು ಕಲಘಟಗಿ ತಾಲೂಕಿನಲ್ಲಿ ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಇಲಾಖೆಯ ನೌಕರರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಕುಮಾರೇಶ್ವರ ಬಡಾವಣೆಯ ಮನೆಯಲ್ಲಿ ವಿಠ್ಠಲ್ ಜೋನಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಮೃತದೇಹವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
