Mallikarjun Kharge: Complaint filed against Mallikarjun Kharge! BJP workers outraged by burning his portrait – Mallikarjun Kharge: ಪ್ರಧಾನಿ ನರೇಂದ್ರ ಮೋದಿಯವರ ತಂದೆ ಬಗ್ಗೆ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದೆ. ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಖರ್ಗೆಯವರು ಮೋದಿಯವರ ಬಳಿ 24 ಗಂಟೆಗಳ ಒಳಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಹಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. “ಮೋದಿ ಕಾ ಬಾಪ್” ಅಂತ ಪ್ರಧಾನಿ ನರೇಂದ್ರ ಮೋದಿಯವರ ತಂದೆಯವರ ಬಗ್ಗೆ ಮಾತನಾಡಿ ವಿವಾದಕ್ಕೆ ಕಾರಣರಾಗಿದ್ದಾರೆ. ಮಾತಿನ ಭರದಲ್ಲಿ ಹೇಳಿದ್ದು ಅಂತ ಕಾಂಗ್ರೆಸ್ ನಾಯಕರು ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಬಿಜೆಪಿ ನಾಯಕರು ಖರ್ಗೆ ವಿರುದ್ಧ ಸಿಡಿದೆದ್ದಿದ್ದಾರೆ. ಖರ್ಗೆಯವರು ಮೋದಿಯವ್ರ ಕ್ಷಮೆ ಕೇಳಬೇಕು ಅಂತ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಖರ್ಗೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಕೈಗೊಂಡಿರೋ ಬಿಜೆಪಿ, ಬಿಹಾರದಲ್ಲಿ ದೂರು ಸಹ ನೀಡಿದೆ.
ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ದೂರು : ಪ್ರಧಾನಿ ನರೇಂದ್ರ ಮೋದಿಯವರ ತಂದೆ ಬಗ್ಗೆ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದೆ. ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಖರ್ಗೆಯವರು ಮೋದಿಯವರ ಬಳಿ 24 ಗಂಟೆಗಳ ಒಳಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ದೂರಿನ ಬಗ್ಗೆ ಪೊಲೀಸರ ಸ್ಪಷ್ಟನೆ : ಬಿಜೆಪಿ ಕಾರ್ಯಕರ್ತ ಕೃಷ್ಣ ಕುಮಾರ್ ಸಿಂಗ್ ಎಂಬುವರು ಪಾಟ್ನಾದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಆದರೆ ಖರ್ಗೆ ಭಾಷಣ ಮಾಡಿದ್ದ ಗಾಂಧಿ ಮೈದಾನ ಸ್ಥಳವು ಅದೇ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವುದರಿಂದ, ದೂರನ್ನು ಅಲ್ಲಿಗೆ ವರ್ಗಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮೋದಿ ತಂದೆಯವರ ಬಗ್ಗೆ ಪ್ರಸ್ತಾಪಿಸಿ ಖರ್ಗೆ ವಿವಾದ : ನಿನ್ನೆ ಬಿಹಾರದ ಮೊದಲ ಮುಖ್ಯಮಂತ್ರಿ ಶ್ರೀಕೃಷ್ಣ ಸಿಂಗ್ ಅವರ 139 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಮಲ್ಲಿಕಾರ್ಜುನ್ ಖರ್ಗೆ ಭಾಷಣ ಮಾಡುತ್ತಿದ್ದಾಗ ಈ ಮಾತಿನ ಚಕಮಕಿ ನಡೆಯಿತು. ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾದವರನ್ನು ಕಾಂಗ್ರೆಸ್ ಜೈಲಿಗೆ ಕಳುಹಿಸುತ್ತದೆ ಎಂದು ಖರ್ಗೆ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ಕಾಂಗ್ರೆಸ್ ಕಾರ್ಯಕರ್ತ ಅಂತ ಹೇಳಲಾಗುವ ವ್ಯಕ್ತಿಯೊಬ್ಬರು ಎದ್ದು ನಿಂತು, ಯಾವುದೇ ದಂಗೆ ಇಲ್ಲದಿರುವವರೆಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲಿಗೂ ಹೋಗುವುದಿಲ್ಲಎಂದು ಕೂಗಿದರು. ಇದಕ್ಕೆ ಸಿಟ್ಟಾದ ಮಲ್ಲಿಕಾರ್ಜುನ್ ಖರ್ಗೆ, “ಮೋದಿ ಕಾ ಬಾಪ್ ಭಿ ಜಾಯೇಗಾ” (ಮೋದಿ ಬಿಡಿ, ಅವರ ತಂದೆಯೂ ಹೋಗುತ್ತಾರೆ) ಎಂದು ಆಕ್ರೋಶದಿಂದಲೇ ತಿರುಗೇಟು ನೀಡಿದರು. ಪ್ರಧಾನಿ ಮೋದಿಯವರ ತಂದೆ ಬಗ್ಗೆ ಪ್ರಸ್ತಾಪ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಖರ್ಗೆ ವಿರುದ್ಧ ಬಿಜೆಪಿ ಪ್ರತಿಭಟನೆ : ಬಿಹಾರದಲ್ಲಿ, ಹೆಚ್ಚಿನ ಸಂಖ್ಯೆಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಖರ್ಗೆ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು ಮತ್ತು ಅವರ ರಾಜೀನಾಮೆಗೆ ಒತ್ತಾಯಿಸಿದರು. ಅವರು ಕಾಂಗ್ರೆಸ್ ಮುಖ್ಯಸ್ಥರ ಪ್ರತಿಕೃತಿಗೆ ಬೆಂಕಿ ಹಚ್ಚಿದರು. ಖರ್ಗೆ ಹೇಳಿಕೆಯನ್ನು ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಖಂಡಿಸಿದ್ದಾರೆ. ದೇಶಾದ್ಯಂತ ಇಂದು ಪ್ರಮುಖ ನಗರಗಳಲ್ಲಿ ಖರ್ಗೆ ವಿರುದ್ಧ ಪ್ರತಿಭಟನೆ ನಡೆಯಿತು.
ಪ್ರಧಾನಿಯವರ ಬಳಿ ಕ್ಷಮೆ ಕೇಳುವಂತೆ ಆಗ್ರಹ : ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸಹ ಬಿಜೆಪಿ ಕಾರ್ಯಕರ್ತರು ಮಲ್ಲಿಕಾರ್ಜುನ್ ಖರ್ಗೆ ಅವರ ಪೋಸ್ಟರ್ಗಳನ್ನು ಸುಟ್ಟು ಘೋಷಣೆಗಳನ್ನು ಕೂಗಿದರು. ಪ್ರಧಾನಿ ನರೇಂದ್ರ ಮೋದಿಯವರ ಬಳಿ ಖರ್ಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ರು.
